ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ‌ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಸೋಮವಾರ ವಿಧಾನಸಭೆ ಕಲಾಪ ಮುಗಿದ ನಂತರ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು.
ಸಿದ್ದರಾಮಯ್ಯ ಅವರ ಜೊತೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕರಾದ ಜಮೀರ್ ಅಹ್ಮದ್ ಖಾನ್, ಭೈರತಿ ಸುರೇಶ, ಅಶೋಕ ಪಟ್ಟಣ ಮತ್ತಿತರಿದ್ದರು.

ರಾಜಕೀಯವಾಗಿ ದೇವೇಗೌಡರ ಶಿಷ್ಯರಾಗಿದ್ದ ಸಿದ್ದರಾಮಯ್ಯ ನಂತರ ಮುನಿಸಿಕೊಂಡು ಜೆಡಿಎಸ್‌ನಿಂದ ಹೊರಬಂದು ಕಾಂಗ್ರೆಸ್ ‌ಸೇರ್ಪಡೆಯಾಗಿದ್ದರು. ನಂತರ ಮುಖ್ಯಮಂತ್ರಿಯೂ ಆದರು. ಅವರು ಮುಖ್ಯಮಂತ್ರಿ ಆದ ಬಳಿಕ 2016ರಲ್ಲಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದರು.
ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಅದಾದ ಬಳಿಕ ದೇವೇಗೌಡರನ್ನು ವೈಯಕ್ತಿಕವಾಗಿ ಭೇಟಿ ಮಾಡಿರಲಿಲ್ಲ. ಈಗ ದೇವೇಗೌಡರನ್ನು‌ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement