ಹಿಂದೂ ಸಂಘಟನೆಗಳು, ಕನ್ನಡ ಸಂಘಟನೆಗಳು, ರೈತರ ಮೇಲೆ ದಾಖಲಾದ ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 35 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸೋಮವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಸಂಪುಟ ಉಪಸಮಿತಿ ಶಿಫಾರಸುಗಳನ್ನು ಆಧರಿಸಿ ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳು ಕಾರ್ಯಕರ್ತರು, ರೈತ ಮುಖಂಡರು ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಯಿತು. ಆದರೆ, ಯಾವ ಯಾವ ಪ್ರಕರಣಗಳನ್ನು ಹಿಂಪಡೆಯಲಾಗುತ್ತಿದೆ ಎಂಬುದು ಗೊತ್ತಾಗಿಲ್ಲ.

ಸಭಾಪತಿ ಚುನಾವಣೆ ಬಗ್ಗೆ ಮಂಗಳವಾರ ತೀರ್ಮಾನ
ವಿಧಾನಪರಿಷತ್ ಸಭಾಪತಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್​ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಈ ಕುರಿತು ಸರ್ಕಾರ ಮಂಗಳವಾರ (ಸೆಪ್ಟೆಂಬರ್‌ ೨೦)ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಯಾಕೆಂದರೆ ಗುರುವಾರದೊಳಗೆ ವಿಧಾನ ಪರಿಷತ್‌ಗೆ ಸಭಾಪತಿ ಆಯ್ಕೆಯಾಗಬೇಕಿದೆ.

2 ಪರೀಕ್ಷಾ ಮಂಡಳಿ ವಿಲೀನಕ್ಕೆ ಸಂಪುಟ ಒಪ್ಪಿಗೆ
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷಾ ಮಂಡಳಿ ವಿಲೀನದ ಕುರಿತು ಚರ್ಚೆ ನಡೆದು ಎರಡೂ ಪರೀಕ್ಷಾ ಮಂಡಳಿ ವಿಲೀನಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ. ಪರೀಕ್ಷೆ ಸಂದರ್ಭದಲ್ಲಿ ಮಾತ್ರ ಪಿಯು ಪರೀಕ್ಷಾ ಮಂಡಳಿ ಕೆಲಸ ನಿರ್ವಹಿಸುತ್ತಿದೆ. ಆರ್ಥಿಕ ನಷ್ಟ ಮತ್ತು ಹೆಚ್ಚುವರಿ ಸಿಬ್ಬಂದಿ ಅವಶ್ಯಕತೆ ಕಡಿಮೆ ಮಾಡಲು ಎರಡು ಪರೀಕ್ಷಾ ಬೋರ್ಡ್ಗಳನ್ನು ವಿಲೀನಗೊಳಿಸಲು ನಿರ್ಧಾರ. ಮಾಡಲಾಯಿತು. ಶಿಕ್ಷಕರ ಮ್ಯೂಚುಯಲ್‌ ವರ್ಗಾವಣೆಗೂ ಒಪ್ಪಿಗೆ ನೀಡಲಾಗಿದ್ದು, ಒಂದೇ ವಿಷಯದ ಇಬ್ಬರೂ ಶಿಕ್ಷಕರು ಒಪ್ಪಿಗೆ ಇದ್ದಲ್ಲಿ ವರ್ಗಾವಣೆ ಮಾಡಿಸಿಕೊಳ್ಳಬಹುದಾಗಿದೆ.
ಅಲ್ಲದೆ, ಕರ್ನಾಟಕ ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕ್ಕೆ ಒಪ್ಪಿಗೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ಉಚಿತ ವಿದ್ಯುತ್ ಆದೇಶಕ್ಕೆ ಅನುಮೋದನೆ
ಎಸ್‌ಸಿ, ಎಸ್‌ಟಿ ಸಮುದಾಯದ ಬಿಪಿಎಲ್ ಕಾರ್ಡ್‌ದಾರರಿಗೆ 75 ಯುನಿಟ್ ಉಚಿತ ವಿದ್ಯುತ್ ಕೊಡುವ ಸರ್ಕಾರದ ಆದೇಶಕ್ಕೆ ಸಮ್ಮತಿ ದೊರೆತಿದೆ. ಮುಖ್ಯಮಂತ್ರಿಗಳ ವಿದ್ಯಾನಿಧಿ ಯೋಜನೆಯನ್ನು ಮೀನುಗಾರರು ಮತ್ತು ಕೃಷಿಕರ ಮಕ್ಕಳಿಗೆ ವಿಸ್ತರಣೆ ಮಾಡಲಾಗುತ್ತದೆ. ಬೆಂಗಳೂರು ಮೆಟ್ರೋಪಾಲಿಟನ್ ಭೂಸಾರಿಗೆ ಪ್ರಾಧಿಕಾರ ವಿಧೇಯಕವನ್ನು ಸದನದಲ್ಲಿ ಮಂಡಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

 

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement