ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : ಕುಮಟಾದಲ್ಲಿ ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ, ಸರ್ಕಾರ-ಖಾಸಗಿ ಸಹಭಾಗಿತ್ವದ ಯೋಜನೆಗೆ ಚಿಂತನೆ

ಕುಮಟಾ; ಉತ್ತರಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕರದ ತಾತ್ವಿಕ ಒಪ್ಪಿಗೆ ಬೆನ್ನಲ್ಲೇ ಇದಕ್ಕೆ ಸಂಬಂಧಿಸಿದ ಪೂರ್ವಭಾವಿ ಚಟುವಟಿಕೆಗಳು ಆರಂಭವಾಗಿದೆ. ಜಿಲ್ಲೆಯ ಕುಮಟಾ ತಾಲೂಕಿನ ವಿವಿಧೆಡೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಂಗಳೂರಿನ ಕೆಎಸ್‌ ಹೆಗಡೆ ಆಸ್ಪತ್ರೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಕುಮಟಾದ ಕುಮಟಾ ರೈಲು ನಿಲ್ದಾಣದ ಸಮೀಪದ ದೀವಗಿ ಬಳಿ ಶಿರಸಿ ರಸ್ತೆಯಲ್ಲಿಯ ಸ್ಥಳ, ಕುಮಟಾ ಬಗ್ಗೋಣ ರಸ್ತೆ ಸರ್ಕಾರಿ ಆಸ್ಪತ್ರೆ ಸಮೀಪದ ಸ್ಥಳ, ಮಿರ್ಜಾನ್ ಸೇರಿದಂತೆ ಕೆಲವು ಪ್ರದೇಶಗಳಿಗೆ ಭೇಟಿ ನೀಡಿರುವ ಅಧಿಕಾರಿಗಳ ತಂಡ, ಬಳಿಕ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದೆ. ಆಸ್ಪತ್ರೆಗೆ ಸೂಕ್ತವಾದ ಸ್ಥಳದ ಕುರಿತು ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಸರ್ಕಾರ-ಖಾಸಗಿ ಜಂಟಿ ಸಹಯೋಗ(ಪಬ್ಲಿಕ್‌ ಪ್ರೈವೇಟ್ ಪಾರ್ಟನರ್‌ಶಿಪ್‌)ದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಧ್ಯತೆಗಳ ಪರಿಶೀಲನೆ ನಡೆಸಿದ್ದೇವೆ.ಇದು ಪೂರ್ವಭಾವಿಯಾಗಿ ನಡೆದ ಸಭೆಯಾಗಿದೆ. ಆಸ್ಪತ್ರೆಯನ್ನು ಖಾಸಗಿ ಸಹಯೋಗದಲ್ಲಿ ಮಾಡಬೇಕೆಂದರೆ ಯಾವೆಲ್ಲ ಅವಕಾಶಗಳಿವೆ, ಹೇಗೆ ಮಾಡಬೇಕು. ಮತ್ತು ಸ್ಥಳೀಯವಾಗಿ ಏನೆಲ್ಲ ಸಾಧ್ಯತೆಗಳು ಹಾಗೂ ಅವಕಾಶಗಳಿವೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಬೇಕಾಗುತ್ತದೆ. ಮುಂದೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಕುಮಟಾ ಹಾಗೂ ಸುತ್ತಮುತ್ತ ಮೂರ್ನಾಲ್ಕು ಜಾಗಗಳನ್ನ ಗುರುತಿಸಲಾಗಿದೆ. ಇದರಲ್ಲಿ ಮಿರ್ಜಾನ್‌ ಸಮೀಪದ ಸ್ಥಳ<, ಶಿರಸಿ ರಸ್ತೆಯಲ್ಲಿ ಸ್ಥಳ ಹಾಗೂ ಕುಮಟಾ ಪಟ್ಟಣದಲ್ಲಿ ಒಂದೆರಡು ಸ್ಥಳಘಲನ್ನು ಗುರುತಿಸಲಾಗಿದೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿ ಒಂದು ಜಾಗವನ್ನ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement