ಶಿಕ್ಷಕರ ಮೇಲಿನ ಪ್ರೀತಿಗೆ ರೈಲನ್ನೇ ತಡೆಹಿಡಿದ ವಿದ್ಯಾರ್ಥಿಗಳು…!

ಕೋಲ್ಕತ್ತಾ: ಶಿಕ್ಷಕರ ವರ್ಗಾವಣೆ ಮಾಡಬೇಡಿ ಎಂದು ಪ್ರತಿಭಟನೆ ನಡೆಸಿದ ಸುದ್ದಿಯನ್ನು ಕೇಳಿದ್ದೇವೆ. ಆದರೆ ಅದಕ್ಕಾಗಿ ರೈಲನ್ನೇ ತಡೆದರೆ…!ಇಥದ್ದೊಂದು ವಿದ್ಯಾಮನ ಕೋಲ್ಕತ್ತಾದ ಸೀಲ್ದಾಹ್ ದಕ್ಷಿಣ ವಿಭಾಗದ ಗೌರ್ದಾಹ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ರೈಲು ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೋಲ್ಕತ್ತಾದ ಕ್ಯಾನಿಂಗ್‌ನಲ್ಲಿರುವ ಗೌರ್ದಾಹ್ ನಾರಾಯಣಪುರ ಅಕ್ಷಯ ವಿದ್ಯಾಮಂದಿರದ ವಿದ್ಯಾರ್ಥಿಗಳು ತಮ್ಮ ಶಾಲೆಯ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದನ್ನು ವಿರೋಧಿಸಿ ಈ ರೈಲು ತಡೆ ನಡೆಸಿದರು.
ನಾರಾಯಣಪುರ ಅಕ್ಷಯ ವಿದ್ಯಾಮಂದಿರದದ ಐವರು ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿತ್ತು. ಇದು ವಿದ್ಯಾರ್ಥಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ನೆಚ್ಚಿನ ಶಿಕ್ಷಕರ ವರ್ಗಾವಣೆ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿ ಮಂಗಳವಾರ ಬೆಳಗ್ಗೆ ಶಾಲಾ ಬಟ್ಟೆ ಧರಿಸಿ ನೂರಾರು ವಿದ್ಯಾರ್ಥಿಗಳು ರೈಲು ತಡೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಗೌರ್ದಾಹ್ ನಿಲ್ದಾಣದಲ್ಲಿ ರೈಲು ತಡೆದು ಏಕಕಾಲದಲ್ಲಿ ಮಾಡಿದ ಐವರು ಶಿಕ್ಷಕರ ವರ್ಗಾವಣೆ ನಿರ್ಧಾರ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರೈಲು ತಡೆ ಮುಂದುವರೆಸಲಾಗುವುದು ಎಂದು ಅವರು ಪಟ್ಟು ಹಿಡಿದಿದ್ದಾರೆ. ಘಟನೆಯಿಂದ ನಿಲ್ದಾಣದ ಆವರಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ.
ನಮ್ಮ ಪ್ರದೇಶದಲ್ಲಿ ಹಲವಾರು ಶಾಲೆಗಳಿವೆ. ಪ್ರತಿ ಶಾಲೆಯಿಂದ ಒಬ್ಬ ಶಿಕ್ಷಕರನ್ನು ವರ್ಗಾವಣೆ ಮಾಡಿದರೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ ಒಂದೇ ಶಾಲೆಯಿಂದ ಐವರು ಶಿಕ್ಷಕರನ್ನು ವರ್ಗಾವಣೆ ಮಾಡುವುದರಿಂದ ನಮ್ಮ ಶಿಕ್ಷಣಕ್ಕೆ ಪೆಟ್ಟು ಬೀಳುತ್ತದೆ. ನಮ್ಮ ಶಾಲೆಯಲ್ಲಿ 11 ಮತ್ತು 12 ನೇ ತರಗತಿಗೆ ಕೇವಲ 3 ಶಿಕ್ಷಕರಿದ್ದಾರೆ. ಹೀಗಾಗಿ ಆಡಳಿತ ಕೂಡಲೇ ವರ್ಗಾವಣೆ ನಿರ್ಧಾರ ಹಿಂಪಡೆಯಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement