2015- 16ರ ಶಿಕ್ಷಕರ ಅಕ್ರಮ ನೇಮಕ ಪ್ರಕರಣ ಸಿಐಡಿ ತನಿಖೆಗೆ: ಸಚಿವ ನಾಗೇಶ

ಬೆಂಗಳೂರು: 2015- 16ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ವಿಧಾನಸಭೆಗೆ ತಿಳಿಸಿದ್ದಾರೆ.
ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಪಿ.ರಾಜೀವ್ ಅವರು ಕೇಳಿದ್ದಕ್ಕೆ ಉತ್ತರಿಸಿದ ಅವರು, 2015- 16ರಲ್ಲಿ ಇದ್ದಕ್ಕಿದ್ದಂತೆ ಒಂದಿಷ್ಟು ಜನರನ್ನು ಯಾವುದೇ ಪರೀಕ್ಷೆ ನಡೆಸದೇ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.
ಪತ್ರಿಕೆಯಲ್ಲಿ ವರದಿ ಬಂದ ನಂತರ ನಾವು ಪ್ರಾಥಮಿಕ ತನಿಖೆ ನಡೆಸಿದಾಗ ಬೆಂಗಳೂರು ವಿಭಾಗದಲ್ಲಿ 16 ಜನರು ಈ ರೀತಿ ನೇಮಕ ಆದೇಶ ಪಡೆದಿರುವುದು ಗೊತ್ತಾಗಿದೆ. ಮತ್ತಷ್ಟು ವಿಚಾರಣೆ ನಡೆಸಿದಾಗ 35 ಜನರು ಈ ರೀತಿ ನೇಮಕ ಆದೇಶ ಪಡೆದಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ. ರಾಜ್ಯಾದ್ಯಂತ ಈ ರೀತಿ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸಮಗ್ರ ತನಿಖೆ ನಡೆಸುತ್ತೇವೆ ಎಂದರು.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement