ಕಾಡಾನೆ ದಾಳಿಯಿಂದ ಬೆಳೆ ಹಾನಿಯಾದರೆ ಪರಿಹಾರ ಹೆಚ್ಚಳ : ಸಿಎಂ ಬೊಮ್ಮಾಯಿ

ಬೆಂಗಳೂರು: ಕಾಡಾನೆ ದಾಳಿಯಿಂದಾದ ಬೆಳೆ ಹಾನಿ ಪರಿಹಾರ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಬುಧವಾರ ವಿಧಾನಸಭೆಯ ಸದನದಲ್ಲಿ ನಿಯಮ 69 ಅಡಿಯಲ್ಲಿ ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ವಿಚಾರವಾಗಿ ನಡೆದ ಚರ್ಚೆಯ ಸಂದರ್ಭದಲ್ಲಿ ಅವರು ಉತ್ತರಿಸಿದರು.
ಸಕಲೇಶಪುರ ಶಾಸಕ ಎಚ್. ಕೆ. ಕುಮಾರಸ್ವಾಮಿ ಅವರು ಸರ್ಕಾರದ ಗಮನ ಸೆಳೆದು ಆನೆ ದಾಳಿಯಿಂದ ಸತ್ತವರಿಗೆ ಸೂಕ್ತ ಪರಿಹಾರ ಇಲ್ಲವೇ ಸರ್ಕಾರಿ ಹುದ್ದೆ ಕೊಡಿ. ಅಲ್ಲದೆ, ಪ್ರತಿ ವರ್ಷ ಬೆಳೆ ನಷ್ಟ ನಿಗದಿ ಮಾಡಿ ಪರಿಹಾರ ಕೊಡಬೇಕು. ಬ್ಯಾರಿಕೇಡ್  ಮಾಡಿ ಕೊಟ್ಟಿದ್ದಾರೆ. ಆದರೆ ಶಾಶ್ವತ ಪರಿಹಾರ ನೀಡಬೇಕು. ಆನೆಗಳನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅರಣ್ಯದ ಅಂಚಿನಲ್ಲಿರುವ ಜಿಲ್ಲೆಗಳಲ್ಲಿ ಆನೆ ಹಾವಳಿ ಇದ್ದು, ಆದರೆ ಆನೆಗಳನ್ನು ಒಕ್ಕಲೆಬ್ಬಿಸುವುದು ಸುಲಭದ ಕೆಲಸ ಅಲ್ಲ, ಅವು ಗುಂಪಿನಲ್ಲಿ ಇರುತ್ತವೆ. ಅನೆಗಳನ್ನು ತಡೆಯಲು ಈಗಾಗಲೇ ರೈಲ್ವೇ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ. ಆನೆ ದಾಳಿಯಿಂದ ಬೆಳೆ ಹಾನಿಯಾದರೆ ಪರಿಹಾರ ದುಪ್ಪಟ್ಟು ಮಾಡಲಾಗುತ್ತದೆ. ಪ್ರಾಣ ಹಾನಿ ಪರಿಹಾರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇಂದಿನ ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ

.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

1 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement