‘ಪೇ ಸಿಎಂ’ ಘೋಷಣೆಯ ಭಿತ್ತಿಪತ್ರ- ಕ್ಯೂ ಆರ್ ಕೋಡ್ ಅಭಿಯಾನ ಆರಂಭಿಸಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ‘ಶೇ 40 ಕಮಿಷನ್ ಸರ್ಕಾರ’ವೆಂದು ಆರೋಪಿಸಿ ‘ಪೇ ಸಿಎಂ’ (Pay CM) ಘೋಷಣೆಯ ಭಿತ್ತಿಪತ್ರ ಮತ್ತು ಕ್ಯೂ ಆರ್ ಕೋಡ್ ಸಹಿತ ಕಾಂಗ್ರೆಸ್ ಪಕ್ಷವು ಅಭಿಯಾನ ಆರಂಭಿಸಿದೆ.
ಬೆಂಗಳೂರು ನಗರದ ವಿವಿಧೆಡೆ ಮುಖ್ಯಮಂತ್ರಿ ಚಿತ್ರ ಸಹಿತ ಈ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧದ ದೂರುಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಘಟಕ ಇತ್ತೀಚೆಗೆ ಬಿಡುಗಡೆ ಮಾಡಿದ ‘ಶೇ 40 ಕಮಿಷನ್ ಸರ್ಕಾರ’ ವೆಬ್ ಸೈಟ್ ತೆರೆದುಕೊಳ್ಳಲಿದೆ ಎಂದು ಹೇಳಲಾಗಿದೆ.

ಸರ್ಕಾರದ ವಿರುದ್ಧ 40% ಕಮಿಷನ್‌ ಆರೋಪವನ್ನು ಅಣಕಿಸಿ ಪೇಟಿಎಂ ಮಾದರಿಯಲ್ಲಿ ರಚಿಸಲಾಗಿರುವ ‘ಪೇ ಸಿಎಂ’ ಪೋಸ್ಟರ್‌ ನಗರದ ಜಯಮಹಲ್‌ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್‌ ಬಳಿ ಸೇರಿದಂತೆ ಕೆಲವೆಡೆ ಕಾಣಿಸಿಕೊಂಡಿದೆ. ಗೋಡೆಗೆ ಪೇ ಸಿಎಂ ಪೋಸ್ಟರ್‌ ಅಂಟಿಸಿ ಬಿಜೆಪಿ ಸರ್ಕಾರವನ್ನು ಅಣಕ ಮಾಡಲಾಗಿದೆ.

ಈ ಮಧ್ಯೆ, ಸದನದಲ್ಲಿ ಬುಧವಾರ 40% ಕಮಿಷನ್‌ ಚರ್ಚೆಗೆ ಕಾಂಗ್ರೆಸ್ ಒಂದು ಕಡೆಯಲ್ಲಿ ನಿಲುವಳಿ ಸೂಚನೆ ನೀಡಿದೆ. ವಿಧಾನಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿಲುವಳಿ ಸೂಚನೆ ಮಂಡಿಸಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಬಿಎಂಪಿ ಸಿಬ್ಬಂದಿ, ಪೊಲೀಸರು ಅದನ್ನು ತೆರವು ಮಾಡುತ್ತಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement