ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬದ್ಧ : ವಿಧಾನಸಭೆಗೆ ತಿಳಿಸಿದ ಆರೋಗ್ಯ ಸಚಿವ ಡಾ.ಸುಧಾಕರ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಅದು ಜಿಲ್ಲೆಯಲ್ಲಿ ಎಲ್ಲಿ ನಿರ್ಮಾಣವಾಗಬೇಕು ಎಂಬುದನ್ನು ಜಾಗದ ಲಭ್ಯತೆ ಆಧಾರದ ಮೇಲೆ ನಿರ್ಧಾರ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಆರ್.ವಿ.ದೇಶಪಾಂಡೆ, ಶಿವರಾಂ ಹೆಬ್ಬಾರ್, ದಿನಕರ ಶೆಟ್ಟಿ, ರೂಪಾಲಿ ನಾಯ್ಕ್ , ಸುನೀಲ್ ನಾಯ್ಕ್ ಸೇರಿದಂತೆ ಎಲ್ಲ ಸದಸ್ಯರು ಪಕ್ಷಾತೀತವಾಗಿ ಈ ವಿಚಾರ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವರು ಈ ಭರವಸೆ ನೀಡಿದರು.

ಉತ್ತರ ಕ‌ನ್ನಡ ಜಿಲ್ಲೆಯ ಶಾಸಕರೆಲ್ಲರೂ ಈ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ್ದು, ಉತ್ತರ ಕನ್ನಡ ಜಿಲ್ಲೆಗೆ ಉತ್ಕೃಷ್ಟ ದರ್ಜೆಯ ಆರೋಗ್ಯ ಸೇವೆ ಸಿಗಬೇಕು ಎಂಬುದರಲ್ಲಿ ಎರಡನೇ ಮಾತೇ ಇಲ್ಲ. ಮುಖ್ಯಮಂತ್ರಿಗಳು ಈಗಾಗಲೇ ಭರವಸೆ ನೀಡಿದ್ದಾರೆ. ತಾತ್ವಿಕ ಒಪ್ಪಿಗೆಯನ್ನು ನೀಡಿದ್ದಾರೆ. ವಿಧಾನಸಭೆ ಕಲಾಪ ಮುಗಿದ ತಕ್ಷಣ ಮತ್ತೊಮ್ಮೆ ಸಭೆ ನಡೆಸಿ ಆದಷ್ಟು ಬೇಗ ಆಸ್ಪತ್ರೆ ವಿಚಾರ ಇತ್ಯರ್ಥಗೊಳಿಸುತ್ತೇವೆ ಎಂದು ಸಚಿವ ಸುಧಾಕರ ಹೇಳಿದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement