ಕರ್ನಾಟಕ ಭೂಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

posted in: ರಾಜ್ಯ | 0

ಬೆಂಗಳೂರು: ಸರ್ಕಾರಿ ಭೂಮಿಯನ್ನು ಕೃಷಿಗಾಗಿ ಬಳಕೆ ಮಾಡಿದ ರೈತರಿಗೆ ಭೂ ಕಬಳಿಕೆ ಅಧಿನಿಯಮದ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಉದ್ದೇಶ ಹೊಂದಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕಯನ್ನು ಕೆಲವು ತಿದ್ದುಪಡಿಯೊಂದಿಗೆ ಗುರುವಾರ  ವಿಧಾನಸಭೆಯಲ್ಲಿ ಅಂಗೀಕಾರ ಪಡೆಯಲಾಯಿತು.
ಬುಧವಾರ ವಿಧೇಯಕವನ್ನು ಮಂಡಿಸಲಾಗಿತ್ತು. ಆದರೆ ವಿಧೇಯಕಕ್ಕೆ ವಿರೋಧ ವ್ಯಕ್ತವಾಗಿತ್ತು. ಆಡಳಿತ ಪಕ್ಷದ ಶಾಸಕ ಗೂಳಿಹಟ್ಟಿ ಶೇಖರಹಾಗೂ ಜೆಡಿಎಸ್ ಸದಸ್ಯ ಎಟಿ ರಾಮಸ್ವಾಮಿ ಸೇರಿದಂತೆ ವಿರೋಧ ವ್ಯಕ್ತಪಡಿಸಿದ್ದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಸರ್ಕಾರಿ ಭೂಮಿಯನ್ನು ಕೃಷಿಗಾಗಿ ಬಳಕೆ ಮಾಡಿದ ರೈತರಿಗೆ ಕಿರುಕುಳ ಆಗುತ್ತಿತ್ತು. ರೈತರಿಗೆ ಅನುಕೂಲ ಮಾಡಲು ತಿದ್ದುಪಡಿ ತರಲಾಗಿದೆ ಎಂದು ಹೇಳುತ್ತೀರಿ. ಆದರೆ ಈ ವಿಧೇಯಕದ ಅಗತ್ಯ ಇರಲಿಲ್ಲ. ರೈತರ ವಿರುದ್ಧ  ಕಂದಾಯ, ಅರಣ್ಯ ಇಲಾಖೆ.‌ ಸರ್ಕಾರದ ಇಲಾಖೆಗಳೇ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿದೆ ಎಂದು ಎಟಿ ರಾಮಸ್ವಾಮಿ ಆಕ್ಷೇಪಿಸಿದ್ದರು.
ಪ್ರಭಾವಿಗಳು ಸುಳ್ಳು ದಾಖಲೆ ಸೃಷ್ಟಿ ಮಾಡಿ ಭೂಕಬಳಿಕೆ ಮಾಡುತ್ತಿದ್ದಾರೆ ಅವರು ಭೂಕಬಳಿಕೆದಾದರು, ರೈತರು ಒತ್ತುವರಿದಾರರು. ‌ಒತ್ತುವರಿದಾರರ ವಿವಾದ ಕೊನೆಗೊಳಿಸುವ ಹೆಸರಿನಲ್ಲಿ ಭೂಗಳ್ಳರಿಗೆ ಅನುಕೂಲ ಆಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದರು.
ಗೂಳಿ ಹಟ್ಟಿ ಶೇಖರ ಮಾತನಾಡಿ, ರೈತರ ಹಿತದೃಷ್ಟಿಯಿಂದ ವಿಧೇಯಕ ಸ್ವಾಗತ. ಆದರೆ ಸರ್ಕಾರಿ ಜಾಗಗಳನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲಾಗುತ್ತಿದೆ. ವಿಧೇಯಕದಲ್ಲಿ ಇದಕ್ಕೆ ಪರಿಹಾರ ಏನಿದೆ ಎಂದು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ ಅವರು ಈ ವಿಧೇಯಕದಿಂದ ಭೂಗಳ್ಳರಿಗೆ ಅನುಕೂಲ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಹೀಗಾಗಿ ಕೆಲವೊಂದು ತಿದ್ದುಪಡಿಯೊಂದಿಗೆ ವಿಧೇಯಕವನ್ನು ಮತ್ತೆ ಮಂಡಿಸಿ ಅಂಗೀಕಾರ ಪಡೆಯಲಾಯಿತು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಅಕ್ಟೋಬರ್‌ 4ರಂದು ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement