ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ವೇಳಾಪಟ್ಟಿ ಪ್ರಕಟ: ಸ್ಪರ್ಧೆಗೆ ಅನೇಕ ಹೆಸರುಗಳು ಚಾಲ್ತಿಗೆ

ನವದೆಹಲಿ: ಅಕ್ಟೋಬರ್‌ 17ರಂದು ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ನಡೆಯಲಿರುವ ಚುನಾವಣೆಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಕಣದಲ್ಲಿ ಇಬ್ಬರು ಪ್ರಮುಖ ಅಭ್ಯರ್ಥಿಗಳು ಈಗ ಸೊರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು, ಅದರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಕಂಡುಬರುತ್ತಿದೆ.
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಮತ್ತು ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಅವರ ಹೆಸರು ಈಗ ಮುಂಚೂಣಿಯಲ್ಲಿವೆ. ರಾಹುಲ್ ಗಾಂಧಿ ಅವರು ತಾವು ಪುನಃ ಅಧ್ಯಕ್ಷರಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವುದರಿಂದ ಚುನಾವಣೆಗೆ ಇನ್ನಷ್ಟು ಜನ ಸ್ಪರ್ಧಿಸುವ ಸಾಧ್ಯತೆ ಕಂಡುಬರುತ್ತಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಸೆಪ್ಟೆಂಬರ್ 22ರಿಂದಲೇ ಚುನಾವಣಾ ಅಧಿಸೂಚನೆ ಜಾರಿಯಾಗಿದೆ. ಸೆಪ್ಟೆಂಬರ್ 24 ರಿಂದ 30ರವರೆಗೂ ನಾಮಪತ್ರ ಸಲ್ಲಿಸಬಹುದಾಗಿದೆ.
ಅಕ್ಟೋಬರ್ 1ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಂತರ ಕ್ರಮಬದ್ಧವಾಗಿರುವ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ.
ನಾಮಪತ್ರ ಹಿಂಪಡೆಯಲು ಅಕ್ಟೋಬರ್‌ 8 ಕೊನೆಯ ದಿನವಾಗಿದೆ. ಚುನಾವಣೆ ನಡೆಸುವುದು ಅಗತ್ಯವಾದರೆ ಅಕ್ಟೋಬರ್‌ 17ರಂದು ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್‌ 19ರಂದು ಎಐಸಿಸಿ ಕೇಂದ್ರ ಕಚೇರಿಯಲ್ಲಿ ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ.

ಓದಿರಿ :-   ಗಾಯಕ ಸಿಧು ಮೂಸೆವಾಲಾ ಹತ್ಯೆ ಆರೋಪಿ ಪೊಲೀಸ್ ವಶದಿಂದ ಪರಾರಿ

ಯಾರ್ಯಾರು ಸ್ಪರ್ಧಿಸುವ ಸಾಧ್ಯತೆ
ರಾಜಸ್ಥಾನ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಮತ್ತು ಕೇರಳ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಅವರಲ್ಲದೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ದಿಗ್ವಿಜಯ ಸಿಂಗ್ ಹಾಗೂ ಕಮಲನಾಥ ಹೆಸರು ಕೂಡ ಚಾಲ್ತಿಯಲ್ಲಿದೆ. ಇವರ ಜೊತೆಗೆ ಕೇಂದ್ರದ ಮಾಜಿ ಸಚಿವರಾದ ಮನೀಶ್ ತಿವಾರಿ, ಪೃಥ್ವಿರಾಜ್ ಚವಾಣ್, ಮುಕುಲ್ ವಾಸ್ನಿಕ್, ಮಲ್ಲಿಕಾರ್ಜುನ ಖರ್ಗೆ ಅವರೂ ಈ ಪಟ್ಟಿಯಲ್ಲಿದ್ದಾರೆ. ಆದರೆ ಈ ಯಾವ ನಾಯಕರೂ ತಾವು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಎಂದು ಬಹಿರಂಗವಾಗಿ ಹೇಳಿಕೊಂಡಿಲ್ಲ. ಸದ್ಯಕ್ಕೆ ಅವರು ಸ್ಪರ್ಧಿಸುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.
ಗಾಂಧಿ ಕುಟುಂಬದವರು 20 ವರ್ಷಗಳಿಂದ ಅಧ್ಯಕ್ಷರಾಗಿದ್ದು, ಈಗ ಮೊದಲ ಬಾರಿ ಚುನಾವಣೆ ಮೂಲಕ ಅಧ್ಯಕ್ಷರ ಆಯ್ಕೆ ನಡೆಯುತ್ತಿರುವುದರಿಂದ ಮತ್ತಷ್ಟು ಸಂಭಾವ್ಯ ಆಕಾಂಕ್ಷಿಗಳ ಹೆಸರು ಇದಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

 

 

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಓದಿರಿ :-   ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ, ಐಸಿಯುಗೆ ದಾಖಲು

1 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement