ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ಎನ್‌ಐಎ ದಾಳಿ

ಬೆಂಗಳೂರು: ಗುರುವಾರ ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿದಂತೆ ರಾಜ್ಯದ ಹಲವೆಡೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಪಿಎಫ್​ಐ, ಎಸ್​ಡಿಪಿಐ ಪದಾಧಿಕಾರಿಗಳ ಮನೆಗಳು ಹಾಗೂ ಪಿಎಫ್​ಐ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರು, ಶಿವಮೊಗ್ಗ, ಮಂಗಳೂರು, ಉತ್ತರ ಕನ್ನಡ, ಕೊಪ್ಪಳ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ದಾಳಿಗಳನ್ನು ನಡೆಸಲಾಗಿದೆ. ಪಿಎಫ್ಐ ಸಂಘಟನೆ ಹಾಗೂ ಎಸ್ ಡಿಪಿಐ ಸಂಘಟನೆಗಳ ಮುಖಂಡರು, ಕಚೇರಿಗಳು ಸೇರಿದಂತೆ ಒಟ್ಟು 12 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ, ರಾಜ್ಯದಲ್ಲಿ ಒಟ್ಟು 20ಕ್ಕೂ ಹೆಚ್ಚು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಹಲವೆಡೆ ದಾಳಿ
ಎನ್‌ಐಎ ಮತ್ತು ಇಡಿ ದಾಳಿಯನ್ನು ವಿರೋಧಿಸಿ ಬೆಂಗಳೂರು, ಮಂಗಳೂರು ಸೇರಿದಂತೆ ಅನೇಕ ಕಡೆ ಪಿಎಫ್‌ಐ ಕಾರ್ಯಕರ್ತರು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಎನ್‌ಐಎ ಗೋ ಬ್ಯಾಕ್ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಕರ್ನಾಟಕ ಪೊಲೀಸರು ಮಂಗಳೂರಿನಲ್ಲಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ. 200ಕ್ಕೂ ಹೆಚ್ಚು ಎನ್‌ಐಎ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಭಯೋತ್ಪಾದನೆಗೆ ಹಣಕಾಸು ನೀಡಿರುವುದು, ಉಗ್ರಗಾಮಿ ಸಂಘಟನೆಗಳಿಗೆ ಸೇರಿಕೊಳ್ಳಲು ಜನರಿಗೆ ಪ್ರಚೋದನೆ ನೀಡುವುದು ಹಾಗೂ ಅವರಿಗೆ ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮುಂತಾದ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಇರುವ ವ್ಯಕ್ತಿಗಳ ಮೇಲೆ ದಾಳಿಗಳು ನಡೆದಿದ್ದು, ಅವರ ಕಚೇರಿ ಹಾಗೂ ಮನೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ದೇಶಾದ್ಯಂತ ಹತ್ತು ರಾಜ್ಯಗಳ ನೂರಕ್ಕೂ ಹೆಚ್ಚು ಸ್ಥಳಗಳ ಮೇಲೆ ಎನ್‌ಐಎ ದಾಳಿ ನಡೆಸಿದೆ. ಅದರಂತೆ ರಾರ್ಜಯದಲ್ಲಿಯೂ ನಡೆದಿದೆ. ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿರುವ ಪಿಎಫ್​ಐ ರಾಜ್ಯ ಘಟಕದ ಅಧ್ಯಕ್ಷ ನಾಸಿರ್ ಪಾಷಾ ನಿವಾಸ, ರಿಚ್ಮಂಡ್ ಟೌನ್​ನಲ್ಲಿರುವ ಪಿಎಫ್​ಐ ರಾಷ್ಟ್ರೀಯ ಕಾರ್ಯದರ್ಶಿ ಮೊಹಮ್ಮದ್ ಸಾಕಿಬ್ ಫ್ಲ್ಯಾಟ್​, ಪಾದರಾಯನಪುರದಲ್ಲಿರುವ ಪಿಎಫ್​ಐ ರಾಜ್ಯ ಘಟಕದ ಕಾರ್ಯದರ್ಶಿ ಅಫ್ಸರ್ ಪಾಷಾ ನಿವಾಸದ ಮೇಲೆ ಎನ್​ಐಎ ದಾಳಿ ನಡೆಸಿದೆ. ಪಾದರಾಯನಪುರ ಹಾಗೂ ಟ್ಯಾನರಿ ರಸ್ತೆಗಳಲ್ಲಿ ದಾಳಿ ನಡೆದ ಮನೆಗಳ ಸಮೀಪ ಸ್ಥಳೀಯ ಪೊಲೀಸರು ಭದ್ರತೆ ನಡುವೆ ದಾಳಿ ನಡೆದಿದೆ.

ಇಂದಿನ ಪ್ರಮುಖ ಸುದ್ದಿ :-   ವಂಚನೆ ಪ್ರಕರಣ: ಆರೋಪಿ ಚೈತ್ರಾ ಹೆಸರಿನೊಂದಿಗೆ ʼಕುಂದಾಪುರʼ ಬಳಸದಂತೆ ಕೋರ್ಟ್‌ ನಿರ್ಬಂಧ

ಮಂಗಳೂರಿನಲ್ಲಿ ದಾಳಿ
ಮಂಗಳೂರಿನಲ್ಲಿ ಎಸ್.ಡಿ.ಪಿ.ಐ ಹಾಗೂ ಪಿಎಫ್ಐ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಎಸ್​ಡಿಐಪಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಅಬುಬಕರ್ ಕುಳಾಯಿ ಸೋದರ ಅಬ್ದುಲ್ ಖಾದರ್ ಕುಳಾಯಿ ಮನೆ ಮೇಲೆ ಎನ್​ಐಎ ದಾಳಿ ನಡೆಸಿದೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್​ಐ ಮತ್ತು ಎಸ್​ಡಿಪಿಐ ಜಿಲ್ಲಾ ಕಚೇರಿಯ ಮೇಲೆಯೂ ಎನ್​ಐಎ ದಾಳಿ ನಡೆದಿದೆ.
ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್​ಡಿಪಿಐ ಕಚೇರಿ ಮೇಲೆ ದಾಳಿ ನಡೆಸಿದ ಎನ್​ಐಎ ಅಧಿಕಾರಿಗಳು ಪುಸ್ತಕ, ಲ್ಯಾಪ್​ಟಾಪ್, 1 ಪೆನ್​ಡ್ರೈವ್, 10ಕ್ಕೂ ಹೆಚ್ಚು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಭಿತ್ತಿಪತ್ರಗಳು, ಟೀ ಶರ್ಟ್ ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಕುಳಾಯಿ, ಕಾವೂರು, ಜೋಕಟ್ಟೆ, ಬಜಪೆಯ ಪಿಎಫ್​ಐ ಮತ್ತು ಎಸ್​ಡಿಪಿಐ ನಾಯಕರ ಮನೆಗಳ ಮೇಲೆಯೂ ದಾಳಿ ನಡೆದಿದೆ. ದಾಳಿ ನಡೆಯುವ ಸ್ಥಳದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್​ಪಿಎಫ್) ಭದ್ರತೆ ಒದಗಿಸಿದೆ.

ಕಲಬುರ್ಗಿಯಲ್ಲಿ ವಶಕ್ಕೆ

ಕಲಬುರಗಿಯಲ್ಲಿ ಒಟ್ಟು ಎರಡು ಕಡೆ ದಾಳಿಯಾಗಿದೆ. ಕಲಬುರಗಿ ನಗರದ ಟಿಪ್ಪು ಸುಲ್ತಾನ್ ನಗರದಲ್ಲಿ ಪಿಎಫ್ಐ ಜಿಲ್ಲಾಧ್ಯಕ್ಷ ಅಧ್ಯಕ್ಷ ಎಜಾಜ್ ಹುಸೇನ್ ಮನೆ‌ ಮೇಲೆ ದಾಳಿ ನಡೆಸಲಾಗಿದ್ದು ಅವರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಆನಂತರ, ಪಿಎಫ್ಐ ಸಂಘಟನೆಯ ಖಜಾಂಚಿ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಪ್ರತಿಭಟನೆಯ ಮಧ್ಯೆಯೂ ಹುಸೇನ್ ಅವರನ್ನು ಪೊಲೀಸರು ತಮ್ಮೊಂದಿಗೆ ಕರೆದೊಯ್ದಿದ್ದಾರೆ.  ಪಿಎಫ್ಐ ರಾಜ್ಯ ಸಂಚಾಲಕ  ನಾಪತ್ತೆಯಾಗಿದ್ದು ಆತನಿಗಾಗಿ  ಹುಡುಕಾಟ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಬಿಜೆಪಿ ಜೊತೆ ಮೈತ್ರಿಯ ನಂತರ ಜೆಡಿಎಸ್ ತೊರೆದ ಹಿರಿಯ ಮುಸ್ಲಿಂ ನಾಯಕ

ಶಿರಸಿಯಲ್ಲಿಯೂ ಎನ್​ಐಎ ದಾಳಿ
ಶಿರಸಿಯಲ್ಲೂ ದಾಳಿ ನಡೆಸಿರುವ ಎನ್‌ಐಎ ಎಸ್.ಡಿ.ಪಿ.ಐ. ಮುಖಂಡನೋರ್ವನನ್ನು ವಶಕ್ಕೆ ತೆಗೆದುಕೊಂಡಿದೆ. ಅಜೀಜ ಅಬ್ದುಲ್ ಶುಕೂರ (45) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಗುರುವಾರ ಬೆಳಿಗ್ಗೆ 4ರ ಸುಮಾರಿಗೆ ಟಿಪ್ಪು ನಗರದಲ್ಲಿ ದಾಳಿ‌ ನಡೆಸಿದ ತನಿಖಾ ದಳ ಹಾಗೂ ಸ್ಥಳೀಯ ಪೊಲೀಸರು ಬೆಳಗಿನ ಅವಧಿಯಲ್ಲಿ‌ ಆರೋಪಿಯನ್ನು ವಶಕ್ಕೆ ಪಡೆದು, ಜೊತೆಗೆ ಲ್ಯಾಪ್‌ಟಾಪ್‌, ಸಿಡಿ, ಎರಡು ಮೊಬೈಲ್, ಪುಸ್ತಕ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೊಪ್ಪಳದಲ್ಲೂ ದಾಳಿ ಈ ನಡುವೆ ಕರ್ನಾಟಕದ ಕೊಪ್ಪಳ (Koppala) ಜಿಲ್ಲೆಯ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದಬಂದಿದೆ. ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಪೊಲೀಸರು ಗಂಗಾವತಿ ನಗರದಲ್ಲಿರುವ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷನನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.    ಶಿವಮೊಗ್ಗ ಪಟ್ಟಣದಲ್ಲಿ ಲಷ್ಕರ್ ಮೊಹಲ್ಲಾ ಬಡಾವಣೆ ನಿವಾಸಿಗಳ ಮನೆಗಳ ಮೇಲೆ ಇ.ಡಿ ಮತ್ತು ಎನ್‌ಐಎ ದಾಳಿ ನಡೆಸಲಾಗಿದ್ದು, ಒಬ್ಬ ಪಿಎಫ್‌ಐ ಕಾರ್ಯಕರ್ತನನ್ನು ಬಂಧಿಸಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.1 / 5. ಒಟ್ಟು ವೋಟುಗಳು 10

  1. Nsa Gupta

    ಈ ಬೋಲೋ ಜೂಟ್ ಪಕ್ಷ ಸಾಬರನ್ನ ಕೆಣಕತಾನೆ ಇರತಾರೇ, ಆಗಲೇ ಎಲ್ಲಾ ಜಾತಿಯವರಿಗೆ ಈ ಸಾಬರು ಕಾಮನ್ ಎನಮಿ ಆಗೋದು, ಜಾತಿ ರಾಜಕಾರಣದಿಂದ ದರ್ಮದ ರಾಜಕಾರಣದ ಕಡೆಗೆ ಇದೇ ಇಂಡಿಯಾ ವಿರೋದಿ ಆರ್ ಎಸ್ ಎಸ್ ಐಡಿಯಾ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement