ವಕ್ಫ್ ಆಸ್ತಿ ಕಬಳಿಕೆ ಕುರಿತ ಅನ್ವರ್‌ ಮಾಣಿಪ್ಪಾಡಿ ಆಯೋಗದ ವರದಿ ಸದನದಲ್ಲಿ ಮಂಡನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್‌ನ ಸುಮಾರು 2.5 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಕೆ ಅವ್ಯವಹಾರ ಕುರಿತ ಅನ್ವರ್‌ ಮಾಣಿಪ್ಪಾಡಿ ಆಯೋಗದ ಪೂರ್ಣ ವರದಿಯನ್ನು ಸದನದಲ್ಲಿ ಮಂಡಿಸಿ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮಂಡಿಸಿ ಮಾತನಾಡಿದ ಬಿಜೆಪಿ ಶಾಸಕರಾದ ಕೆ.ರಘುಪತಿ ಭಟ್‌, ಬಸನಗೌಡ ಪಾಟಿಲ್‌ ಯತ್ನಾಳ, ಸಂಜೀವ ಮಠಂದೂರು, ‘ವಕ್ಫ್‌ ಬೋರ್ಡಿನ 29 ಸಾವಿರ ಎಕರೆ ಜಮೀನನ್ನು ಕಬಳಿಸಲಾಗಿದೆ. ವರದಿಯನ್ನು ಸದನದಲ್ಲಿ ಮಂಡಿಸಿ ಚರ್ಚೆಗೆ ಅವಕಾಶ ನೀಡಬೇಕು. ಹಾಗೂ ಇದನ್ನು ಸಿಬಿಐ ತನಿಖೆಗೆ ವಹಿಸಿ ತಪ್ಪಿತಸ್ಥರನ್ನು ಬಂಧಿಸಬೇಕು’ ಎಂದು ಒತ್ತಾಯ ಮಾಡಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಅನ್ವರ್‌ ಮಾಣಿಪ್ಪಾಡಿ ಆಯೋಗದ ಪೂರ್ಣ ವರದಿಯನ್ನು ಸದನದಲ್ಲಿ ಮಂಡಿಸಲಾಗುವುದು. ಅಲ್ಲದೆ ಈ ಕುರಿತು ಉಪ ಲೋಕಾಯುಕ್ತರು ನೀಡಿರುವ ವರದಿ ಆಧಾರದ ಮೇಲೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸುಮಾರು 2.5 ಲಕ್ಷ ಕೋಟಿ ರೂ.ಗಳಷ್ಟು ವಕ್ಫ್‌ ಆಸ್ತಿ ದೊಡ್ಡ ದೊಡ್ಡವರ ಪಾಲಾಗಿದೆ. ಈ ಬಗ್ಗೆ ವರದಿಯನ್ನು ಸದನದಲ್ಲಿ ಮಂಡಿಸಿ ಪ್ರತಿಯೊಬ್ಬ ಸದಸ್ಯರಿಗೂ ಪ್ರತಿ ನೀಡುತ್ತೇವೆ ಎಂದರು.

ಪ್ರಮುಖ ಸುದ್ದಿ :-   ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

ಪರಿಷತ್‌ನಲ್ಲೂ ಮಾಣಿಪ್ಪಾಡಿ ವರದಿ ಮಂಡನೆಗೆ ಪಟ್ಟು
ವಕ್ಫ್ ಆಸ್ತಿ ಕಬಳಿಕೆ ಕುರಿತ ಅನ್ವರ್‌ ಮಾಣಿಪ್ಪಾಡಿ ವರದಿ ಕುರಿತು ವಿಧಾನ ಪರಿಷತ್‌ನಲ್ಲೂ ಪ್ರಸ್ತಾಪವಾಯಿತು. ಆದರೆ ನಿಯಮ ಪ್ರಕಾರ ನೋಟಿಸ್‌ ನೀಡದ ಕಾರಣ, ವರದಿಯನ್ನು ಸದನದಲ್ಲಿ ಸರ್ಕಾರ ಮಂಡಿಸಬೇಕೆಂದು ಕೋರಿದ ಬಿಜೆಪಿ ಸದಸ್ಯರ ಮನವಿಯನ್ನು ಸಭಾಪತಿ ರಘುನಾಥ್‌ರಾವ್‌ ಮಲ್ಕಾಪುರೆ ತಿರಸ್ಕರಿಸಿದರು. ಬಿಜೆಪಿ ಸದಸ್ಯರು ವಕ್ಫ್ ಸಚಿವರು ವರದಿಯನ್ನು ಸದನದಲ್ಲಿ ಮಂಡಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಆಕ್ಷೇಪ ಬಿ.ಕೆ. ಹರಿಪ್ರಸಾದ್‌ ಆಕ್ಷೇಪ ವ್ಯಕ್ತಪಡಿಸಿದರು. ಆದರೆ ಬಿಜೆಪಿ ಸದಸ್ಯರು ಮಂಡಿಸಬೇಕು ಎಂದು ಪಟ್ಟು ಹಿಡಿದರು. ಆಗ ಸಭಾಪತಿ ಮಲ್ಕಾಪುರೆ, ಅಸಮಾಧಾನ ವ್ಯಕ್ತಪಡಿಸಿ ಈ ಬಗ್ಗೆ ಮೊದಲೇ ನೋಟಿಸ್‌ ನೀಡಿಲ್ಲ. ಹೀಗಾಗಿ ಯಾರಿಗೂ ಮಾತನಾಡಲು ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement