ದೆಹಲಿ ಮಸೀದಿಗೆ ಭೇಟಿ ನೀಡಿದ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ : ಅವರನ್ನು “ರಾಷ್ಟ್ರ ಪಿತ” ಎಂದು ಬಣ್ಣಿಸಿದ ಉನ್ನತ ಧರ್ಮಗುರು

ನವದೆಹಲಿ: ಸಮುದಾಯವನ್ನು ಸಂಪರ್ಕಿಸುವ ಭಾಗವಾಗಿ ಮುಸ್ಲಿಂ ಮುಖಂಡರನ್ನು ಭೇಟಿಯಾಗಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಗುರುವಾರ ದೆಹಲಿಯ ಮಸೀದಿ ಮತ್ತು ಮದರಸಾವೊಂದಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳು ಮತ್ತು ಮುಖ್ಯ ಧರ್ಮಗುರುಗಳೊಂದಿಗೆ ಸಂವಾದ ನಡೆಸಿದ್ದಾರೆ.
ಮೋಹನ್‌ ಭಾಗವತ್ ಅವರನ್ನು ರಾಷ್ಟ್ರಪಿತ ಎಂದು ಕರೆದ ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಮುಖ್ಯಸ್ಥ ಉಮರ್ ಅಹ್ಮದ್ ಇಲ್ಯಾಸ್, “ನಮ್ಮ ಡಿಎನ್‌ಎ ಒಂದೇ, ದೇವರನ್ನು ಪೂಜಿಸುವ ವಿಧಾನ ಮಾತ್ರ ವಿಭಿನ್ನವಾಗಿದೆ” ಎಂದು ಹೇಳಿದರು. “ರಾಷ್ಟ್ರವು ಮೊದಲು ಬರುತ್ತದೆ ಎಂದು ನಾವೆಲ್ಲರೂ ನಂಬುತ್ತೇವೆ” ಎಂದು ಅವರು ಹೇಳಿದರು.ಮುಖಂಡರನ್ನು ಸಂಪರ್ಕಿಸುತ್ತಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಗುರುವಾರ ದೆಹಲಿಯಲ್ಲಿ ಪ್ರಮುಖ ಧರ್ಮಗುರುಗಳನ್ನು ಭೇಟಿ ಮಾಡಿದ್ದರು.
“ನನ್ನ ಆಹ್ವಾನದ ಮೇರೆಗೆ ಮೋಹನ್ ಭಾಗವತ್ ಅವರು ಇಂದು ಭೇಟಿ ನೀಡಿದ್ದಾರೆ. ಅವರು ‘ರಾಷ್ಟ್ರ-ಪಿತ’ ಮತ್ತು ‘ರಾಷ್ಟ್ರ-ಋಷಿ’, ಅವರ ಭೇಟಿಯಿಂದ ಉತ್ತಮ ಸಂದೇಶ ಹೊರಡಲಿದೆ. ದೇವರನ್ನು ಆರಾಧಿಸುವ ನಮ್ಮ ವಿಧಾನಗಳು ವಿಭಿನ್ನವಾಗಿವೆ, ಆದರೆ ದೊಡ್ಡ ಧರ್ಮವೆಂದರೆ ಮಾನವೀಯತೆ. ದೇಶವು ಮೊದಲು ಬರುತ್ತದೆ ಎಂದು ನಾವು ನಂಬುತ್ತೇವೆ ಎಂದು ಉಮರ್ ಅಹ್ಮದ್ ಇಲ್ಯಾಸಿ ಹೇಳಿದರು.

ಪ್ರಮುಖ ಸುದ್ದಿ :-   ಕುಖ್ಯಾತ ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು

ಮೋಹನ್ ಭಾಗವತ್ ಅವರು ಗುರುವಾರ ದೆಹಲಿಯ ಮಸೀದಿ ಮತ್ತು ಮದರಸಾವೊಂದಕ್ಕೆ ಭೇಟಿ ನೀಡಿ ಆಲ್ ಇಂಡಿಯಾ ಇಮಾಮ್ ಸಂಘಟನೆಯ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ‘ಸರಸಂಘಚಾಲಕ’ ಮಧ್ಯ ದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗದಲ್ಲಿರುವ ಮಸೀದಿಗೆ ಹೋದರು ಮತ್ತು ಉತ್ತರ ದೆಹಲಿಯ ಆಜಾದ್‌ಪುರದಲ್ಲಿರುವ ಮದರ್ಸಾ ತಜ್ವೀದುಲ್ ಕುರಾನ್‌ಗೆ ಭೇಟಿ ನೀಡಿದರು.
ಒಂದು ತಿಂಗಳ ಅವಧಿಯಲ್ಲಿ ಮುಸ್ಲಿಂ ಬುದ್ಧಿಜೀವಿಗಳೊಂದಿಗೆ ಆರ್‌ಎಸ್‌ಎಸ್ ಮುಖ್ಯಸ್ಥರು ನಡೆಸುತ್ತಿರುವ ಎರಡನೇ ಸಭೆ ಇದಾಗಿದೆ. ಈ ಹಿಂದೆ ಮೋಹನ್ ಭಾಗವತ್ ಅವರು ‘ಕೋಮು ಸೌಹಾರ್ದತೆ ಗಟ್ಟಿಗೊಳಿಸಲು’ ಐವರು ಮುಸ್ಲಿಂ ಬುದ್ಧಿಜೀವಿಗಳನ್ನು ಭೇಟಿ ಮಾಡಿದ್ದರು.

ಈ ಸಭೆಯು ನಿರಂತರ ಚರ್ಚೆಯ ಭಾಗವಾಗಿದೆ ಎಂದು ಆರ್‌ಎಸ್‌ಎಸ್ ವಕ್ತಾರ ಸುನೀಲ್ ಅಂಬೇಕರ್ ಹೇಳಿದ್ದಾರೆ. ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್‌ ಭಾಗವತ್‌ ಅವರು ಎಲ್ಲಾ ವರ್ಗದ ಜನರನ್ನು ಭೇಟಿ ಮಾಡುತ್ತಾರೆ. ಇದು ನಿರಂತರ ಸಾಮಾನ್ಯ ಸಂವಾದ ಪ್ರಕ್ರಿಯೆಯ ಭಾಗವಾಗಿದೆ ಎಂದು ಅಂಬೇಕರ್‌ ಹೇಳಿದ್ದಾರೆ.
ಕಸ್ತೂರಬಾ ಗಾಂಧಿ ಮಾರ್ಗ ಮಸೀದಿಯಲ್ಲಿ ಮೋಹನ್ ಭಾಗವತ್ ಮತ್ತು ಇಮಾಮ್ ನಡುವೆ ಮುಚ್ಚಿದ ಬಾಗಿಲಿನ ಸಭೆ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು.
ಆಗಸ್ಟ್ 22 ರಂದು, ಶ್ರೀ ಭಾಗವತ್ ಅವರು ಐದು ಮುಸ್ಲಿಂ ಬುದ್ಧಿಜೀವಿಗಳನ್ನು ಭೇಟಿ ಮಾಡಿದರು ಮತ್ತು ದೇಶದಲ್ಲಿ “ಪ್ರಸ್ತುತ ಅಸಂಗತ ವಾತಾವರಣ”ದ ಬಗ್ಗೆ ತಮ್ಮ ಕಳವಳವನ್ನು ಹಂಚಿಕೊಂಡರು ಎಂದು ಹೇಳಲಾಗಿದೆ. ಎರಡೂ ಕಡೆಯವರು ವಿಭಜಕ ಆಕ್ಷೇಪಣೆಗಳ ಬಗ್ಗೆ ಒತ್ತು ನೀಡದಿರುವುದರ ಬಗ್ಗೆ ಚರ್ಚಿಸಿದರು.
75 ನಿಮಿಷಗಳ ಸಭೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಬುದ್ಧಿಗಳ ಸಭೆಯಲ್ಲಿ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌ವೈ ಖುರೈಶಿ ಸಹ ಪಾಲ್ಗೊಂಡಿದ್ದರು. ಅದರಲ್ಲಿ ಮುಖ್ಯವಾಗಿ ಗೋ ಹತ್ಯೆಯ ವಿಚಾರವಾಗಿಯೂ ಚರ್ಚೆ ನಡೆಯಿತು ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement