ಪಿಎಫ್ಐ ಮುಖಂಡರ ಮನೆ ಮೇಲೆ ಎನ್‌ಐಎ ದಾಳಿ: ಹುಬ್ಬಳ್ಳಿಯಲ್ಲಿ ಪ್ರತಿಭಟನೆ, ಕೆಲವರು ವಶಕ್ಕೆ

ಹುಬ್ಬಳ್ಳಿ: ಎನ್‌ಐಎದವರು ಪಿಎಫ್ಐ ಹಾಗೂ ಎಸ್ ಡಿಪಿಐ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದನ್ನು ಖಂಡಿ ಪಿಎಫ್‌ಐ ಕಾರ್ಯಕರ್ತರು ಗೋಬ್ಯಾಕ್ ಎನ್ ಐಎ ಎಂದು ಘೋಷಣೆ ಕೂಗಿ ನಗರದ ಕೌಲಪೇಟೆಯಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು.
ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕುಮ್ಮಕ್ಕಿನಿಂದಾಗಿ ಎನ್‌ಐಎದವರು ಪಿಎಫ್ಐ ಹಾಗೂ ಎಸ್‌ಡಿಪಿಐ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ದಾಳಿ ಮಾಡುತ್ತಿದ್ದಾರೆಂದು ಆರೋಪಿಸಿದರು.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಹಾಗೂ ಕೆಲವರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.
ಪಿ.ಬಿ. ರಸ್ತೆಗೆ ಬಂದು ರ್ಸತೆ ತಡೆದು ಪ್ರತಿಭಟನೆಗೆ ಮುಂದಾದ ಪಿಎಫ್‌ಐ ಕಾರ್ಯಕರ್ತರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಚದುರಿಸಿದ್ದಾರೆ. ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಗೋ ಬ್ಯಾಕ್ ಎನ್ಐಎ ಎಂದು ಘೋಷಣೆ ಕೂಗಿದವರನ್ನು ತಡೆದ ಪೊಲೀಸರು, ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement