ರಾಜ್ಯದ 43 ಸಾವಿರ ಪೌರ ಕಾರ್ಮಿಕರ ಕಾಯಂ ನೇಮಕಾತಿ: ಸಿಎಂ ಬೊಮ್ಮಾಯಿ ಭರವಸೆ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಎಲ್ಲ ಪೌರಕಾರ್ವಿುಕರ ಕಾಯಂ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ, ಪೌರಕಾರ್ವಿುಕರಿಗೆ ಸಂಬಂಧಿಸಿದಂತೆ ಐಡಿಪಿ ಸಾಲಪ್ಪ ವರದಿ ಅನುಷ್ಠಾನಕ್ಕೆ ಸರ್ಕಾರ ಬದ್ಧ ಎಂದು ತಿಳಿಸಿದ್ದಾರೆ.

ಕಳೆದ ಸಂಪುಟ ಸಭೆಯಲ್ಲಿ 11 ಸಾವಿರ ಪೌರಕಾರ್ವಿುಕರ ಸೇವೆ ಕಾಯಂ ಮಾಡಲು ತೀರ್ವನಿಸಲಾಗಿತ್ತು. ಇನ್ನೂ 43 ಸಾವಿರ ಜನರು ಬಾಕಿ ಇದ್ದು, ಅವರ ಕಾಯಂಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಇಂತಹ 54 ಸಾವಿರ ಪೌರ ಕಾರ್ವಿುಕರಿದ್ದು, ಸಂಪುಟ ಸಭೆಯಲ್ಲಿ 11 ಸಾವಿರ ಜನರನ್ನು ಕಾಯಂ ಮಾಡಲು ನಿರ್ಧರ ತೆಗೆದುಕೊಳ್ಳಲಾಗಿತ್ತು. ಈಗ.ಉಳಿದ 43 ಸಾವಿರ ಪಾರ ಕಾರ್ಮಿಕರನ್ನು ಕಾಯಂ ಮಾಡಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement