ಚುನಾವಣಾ ಕರ್ತವ್ಯದಲ್ಲಿರುವವರಿಗೆ ಪೋಸ್ಟಲ್ ಬ್ಯಾಲೆಟ್ ಆಯ್ಕೆ ತೆಗೆದುಹಾಕಲು ಪ್ರಸ್ತಾವನೆ ಸಲ್ಲಿಸಿದ ಚುನಾವಣಾ ಆಯೋಗ

ನವದೆಹಲಿ: ಚುನಾವಣಾ ಆಯೋಗವು ಕಳೆದ ವಾರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿ ತಮ್ಮ ಮತದಾನವನ್ನು ಅಂಚೆ ಮೂಲಕ ಕಳುಹಿಸುವ ಬದಲು ಅವರಿಗಾಗಿ ಸ್ಥಾಪಿಸಲಾದ ಮತದಾರರ ಅನುಕೂಲ ಕೇಂದ್ರಗಳಲ್ಲಿ ಚಲಾಯಿಸಬೇಕು, ಈ ಕ್ರಮವು ದುರುಪಯೋಗದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ ಎಂದು ಪ್ರಸ್ತಾಪಿಸಿದೆ ಎಂದು ಚುನಾವಣಾ ಆಯೋಗದ ಮೂಲಗಳು ಬುಧವಾರ ತಿಳಿಸಿವೆ. ಮುಖ್ಯ ಚುನಾವಣಾ … Continued

ಆಪರೇಷನ್ ಮಿಡ್ ನೈಟ್ : 200 ಎನ್‌ಐಎ ಅಧಿಕಾರಿಗಳಿಂದ 10 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಏಕಕಾಲಕ್ಕೆ ದಾಳಿ ನಡೆಸಲು ಮಾಸ್ಟರ್ ಪ್ಲಾನ್ ಹೇಗಿತ್ತು ಗೊತ್ತಾ…?

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮೇಲಿನ ಬೃಹತ್, ಬಹು-ಏಜೆನ್ಸಿ ದಮನವನ್ನು ಗೃಹ ಸಚಿವಾಲಯ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಜಾರಿ ನಿರ್ದೇಶನಾಲಯ (ಇಡಿ) ಮತ್ತು ಗುಪ್ತಚರ ಬ್ಯೂರೋ ಅಧಿಕಾರಿಗಳು ಸೆಪ್ಟೆಂಬರ್ 19 ರಂದು ಚರ್ಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಗೃಹ ಸಚಿವಾಲಯದ ಅಧಿಕಾರಿಗಳು ಮತ್ತು ಕೇಂದ್ರ ಏಜೆನ್ಸಿಗಳ ಉನ್ನತ ಅಧಿಕಾರಿಗಳೊಂದಿಗೆ ಸಭೆ … Continued

ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬದ್ಧ : ವಿಧಾನಸಭೆಗೆ ತಿಳಿಸಿದ ಆರೋಗ್ಯ ಸಚಿವ ಡಾ.ಸುಧಾಕರ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಅದು ಜಿಲ್ಲೆಯಲ್ಲಿ ಎಲ್ಲಿ ನಿರ್ಮಾಣವಾಗಬೇಕು ಎಂಬುದನ್ನು ಜಾಗದ ಲಭ್ಯತೆ ಆಧಾರದ ಮೇಲೆ ನಿರ್ಧಾರ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಆರ್.ವಿ.ದೇಶಪಾಂಡೆ, … Continued

ಹಿಜಾಬ್ ಪ್ರಕರಣ: 10 ದಿನಗಳ ವಿಚಾರಣೆಯ ನಂತರ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ ಕಾಯ್ದಿರಿಸಿದೆ. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಅರ್ಜಿದಾರರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಹತ್ತು ದಿನಗಳ … Continued

ರಾಜ್ಯದ 43 ಸಾವಿರ ಪೌರ ಕಾರ್ಮಿಕರ ಕಾಯಂ ನೇಮಕಾತಿ: ಸಿಎಂ ಬೊಮ್ಮಾಯಿ ಭರವಸೆ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಎಲ್ಲ ಪೌರಕಾರ್ವಿುಕರ ಕಾಯಂ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ, ಪೌರಕಾರ್ವಿುಕರಿಗೆ ಸಂಬಂಧಿಸಿದಂತೆ ಐಡಿಪಿ ಸಾಲಪ್ಪ ವರದಿ ಅನುಷ್ಠಾನಕ್ಕೆ ಸರ್ಕಾರ ಬದ್ಧ ಎಂದು ತಿಳಿಸಿದ್ದಾರೆ. ಕಳೆದ ಸಂಪುಟ ಸಭೆಯಲ್ಲಿ 11 ಸಾವಿರ ಪೌರಕಾರ್ವಿುಕರ ಸೇವೆ ಕಾಯಂ … Continued

ಇರಾನ್‌ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆಗಳು ತೀವ್ರ, ಸಾವಿನ ಸಂಖ್ಯೆ 8ಕ್ಕೆ ಏರಿಕೆ, ಇಂಟರ್ನೆಟ್ ಸ್ಥಗಿತ

ದುಬೈ:  ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಅನ್ನು ಜಾರಿಗೊಳಿಸುವ ಜವಾಬ್ದಾರಿಯುತ ನೈತಿಕತೆಯ ಪೊಲೀಸರು ಬಂಧಿಸಿದ್ದ ಯುವತಿಯ ಸಾವಿನ ನಂತರ ಭುಗಿಲೆದ್ದ ಹಿಜಾಬ್‌ ವಿರುದ್ಧದ ಪ್ರತಿಭಟನೆ ಐದನೇ ದಿನಕ್ಕೆ ಮುಂದುವರಿದಿದ್ದು, ಪ್ರತಿಭಟನೆ ತೀವ್ರಗೊಂಡ ನಂತರ ಸಾಮಾಜಿಕ ಮಾಧ್ಯಮಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಸತ್ತವರ ಸಂಖ್ಯೆ ಎಂಟಕ್ಕೆ ಏರಿದೆ ಎಂದು ಅಧಿಕೃತ ಮೂಲಗಳು … Continued

ವಕ್ಫ್ ಆಸ್ತಿ ಕಬಳಿಕೆ ಕುರಿತ ಅನ್ವರ್‌ ಮಾಣಿಪ್ಪಾಡಿ ಆಯೋಗದ ವರದಿ ಸದನದಲ್ಲಿ ಮಂಡನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್‌ನ ಸುಮಾರು 2.5 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಕೆ ಅವ್ಯವಹಾರ ಕುರಿತ ಅನ್ವರ್‌ ಮಾಣಿಪ್ಪಾಡಿ ಆಯೋಗದ ಪೂರ್ಣ ವರದಿಯನ್ನು ಸದನದಲ್ಲಿ ಮಂಡಿಸಿ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮಂಡಿಸಿ ಮಾತನಾಡಿದ ಬಿಜೆಪಿ ಶಾಸಕರಾದ ಕೆ.ರಘುಪತಿ ಭಟ್‌, ಬಸನಗೌಡ … Continued

ಬೆಂಗಳೂರು ನಗರದಲ್ಲಿ ಇನ್ಮುಂದೆ ವಾಹನಗಳಿಗೆ ಉಚಿತ ಪಾರ್ಕಿಂಗ್‌ ಇಲ್ಲ

ಬೆಂಗಳೂರು:  ಬೆಂಗಳೂರು ನಗರದಲ್ಲಿ ಇನ್ಮುಂದೆ ಉಚಿತವಾಗಿ ವಾಹನ ನಿಲುಗಡೆಗೆ ಕಡಿವಾಣ ಬೀಳಲಿದೆ. ಬಿಬಿಎಂಪಿಯು, ನಗರ ಭೂಸಾರಿಗೆ ನಿರ್ದೇಶನಾಲಯವು (ಡಲ್ಟ್‌) ರೂಪಿಸಿದ್ದ ಹೊಸ ಪಾರ್ಕಿಂಗ್‌ ನೀತಿ-2.0 ಅನ್ವಯ ಶುಲ್ಕ ಪಾವತಿಸಿ ವಾಹನ ನಿಲುಗಡೆ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಬಿಬಿಎಂಪಿಯ ಎಂಟು ವಲಯಗಳಲ್ಲೂ ಪ್ರತ್ಯೇಕ ಪಾರ್ಕಿಂಗ್‌ ಯೋಜನೆ ರೂಪಿಸಿದ್ದು, ವಾಣಿಜ್ಯ ಪ್ರದೇಶಗಳು, ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್‌ … Continued

ದೇಶದ 10 ರಾಜ್ಯಗಳಲ್ಲಿ ಪಿಎಫ್ಐ ಮುಖಂಡರು, ಕಚೇರಿ ಮೇಲೆ ಏಕಕಾಲಕ್ಕೆ ಎನ್‌ಐಎ ದಾಳಿ, ಪಿಎಫ್‌ಐ ಮುಖ್ಯಸ್ಥ ಸೇರಿ 100ಕ್ಕೂ ಜನರ ಬಂಧನ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಭಯೋತ್ಪಾದಕ-ಧನಸಹಾಯ ಶಂಕಿತರ ವಿರುದ್ಧ ರಾಷ್ಟ್ರವ್ಯಾಪಿ ದಾಳಿಗಳನ್ನು ನಡೆಸಿತು ಮತ್ತು 100 ಕ್ಕೂ ಹೆಚ್ಚು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರನ್ನು ಬಂಧಿಸಿದೆ. ಮಲಪ್ಪುರಂನ ಮಂಜೇರಿಯಲ್ಲಿ ಪಿಎಫ್‌ಐ ಅಧ್ಯಕ್ಷ ಒಎಂಎ ಸಲಾಂ ಮತ್ತು ರಾಜ್ಯಾಧ್ಯಕ್ಷ ಸಿಪಿ ಮುಹಮ್ಮದ್ ಬಶೀರ್ ಅವರನ್ನು ಬಂಧಿಸಲಾಗಿದೆ. … Continued

ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ಎನ್‌ಐಎ ದಾಳಿ

ಬೆಂಗಳೂರು: ಗುರುವಾರ ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿದಂತೆ ರಾಜ್ಯದ ಹಲವೆಡೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಪಿಎಫ್​ಐ, ಎಸ್​ಡಿಪಿಐ ಪದಾಧಿಕಾರಿಗಳ ಮನೆಗಳು ಹಾಗೂ ಪಿಎಫ್​ಐ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರು, ಶಿವಮೊಗ್ಗ, ಮಂಗಳೂರು, ಉತ್ತರ ಕನ್ನಡ, ಕೊಪ್ಪಳ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ದಾಳಿಗಳನ್ನು ನಡೆಸಲಾಗಿದೆ. … Continued