ಇದು ಅಕ್ರಮ..: …’ಪೇಟಿಎಂ’ ಪೋಸ್ಟರ್‌ನಲ್ಲಿ ಒಪ್ಪಿಗೆಯಿಲ್ಲದೆ ತನ್ನ ಫೋಟೋ ಬಳಸಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದ ನಟ…!

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನ ಪೇಸಿಎಂ ಪೋಸ್ಟರ್‌ಗಳಿಗೆ ತಮ್ಮ ಫೋಟೋವನ್ನು ಬಳಸಲಾಗಿದೆ ಎಂದು  ಬೆಂಗಳೂರು ಮೂಲದ ನಟ ಅಖಿಲ್ ಅಯ್ಯರ್   ಫ್ಲ್ಯಾಗ್ ಮಾಡಿದ್ದಾರೆ. ಹಾಗೂ ತಮ್ಮ ಒಪ್ಪಿಗೆಯಿಲ್ಲದೆ ತಮ್ಮ ಫೋಟೋ ಬಳಸಲಾಗಿದೆ ಎಂದು  ಹೇಳಿದ್ದಾರೆ. ಅಲ್ಲದೆ, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಪೇಟಿಎಂ ಮಾದರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚಿತ್ರವಿರುವ ಪೇಸಿಎಂ ಪೋಸ್ಟರ್‌ಗಳನ್ನು ಹಾಕಲಾಗಿದೆ. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ ಶೇಕಡಾ 40 ರಷ್ಟು ಕಮಿಷನ್ ದರವು ಹೇಗೆ ರೂಢಿಯಾಗಿದೆ ಎನ್ನುವುದನ್ನು ಎತ್ತಿ ತೋರಿಸಲು “40% ಸರ್ಕಾರ” ಎಂದು ಕಾಂಗ್ರೆಸ್‌ ಈ ಪೋಸ್ಟರ್‌ಗಳನ್ನು ವಿನ್ಯಾಸಗೊಳಿಸಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಒಂದು ಪೋಸ್ಟರ್‌ನಲ್ಲಿ ಅಖಿಲ್ ಅಯ್ಯರ್ ಅವರ ಫೋಟೋವನ್ನು ಬಳಸಲಾಗಿದೆ ಮತ್ತು “ನೀವು ಇನ್ನೂ ನಿಶ್ಚೇಷ್ಟಿತರಾಗಿದ್ದೀರಾ?”, “40% ಸರ್ಕಾರರ ಹೊಟ್ಟೆಬಾಕತನವು 54,000 ಕ್ಕೂ ಹೆಚ್ಚು ಯುವಕರನ್ನು ವೃತ್ತಿಜೀವನವನ್ನು ಕಸಿದುಕೊಂಡಿದೆ” ಎಂಬ ಪದಗುಚ್ಛಗಳನ್ನು ಅದು ಹೊಂದಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ನಟ ಅಖಿಲ್ ಅಯ್ಯರ್ ಅವರು ತಮ್ಮ ಚಿತ್ರದ “ಅಕ್ರಮ” ಬಳಕೆಯನ್ನು ಫ್ಲ್ಯಾಗ್ ಮಾಡಿದ್ದಾರೆ ಮತ್ತು “ನನ್ನ ಫೋಟೊವನ್ನು ಕಾನೂನುಬಾಹಿರವಾಗಿ ಮತ್ತು ನನ್ನ ಒಪ್ಪಿಗೆಯಿಲ್ಲದೆ “40% ಸರ್ಕಾರ” ಎಂಬ ಕಾಂಗ್ರೆಸ್ ಪ್ರಚಾರಕ್ಕಾಗಿ ಬಳಸುತ್ತಿರುವುದನ್ನು ನೋಡಿ ನನಗೆ ದಿಗಿಲಾಯಿತು ಎಂದು ಹೇಳಿದ್ದು, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.
ಈ ಪೋಸ್ಟ್‌ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರನ್ನು ಟ್ಯಾಗ್ ಮಾಡಿದ ಅವರು ಈ ವಿಷಯವನ್ನು ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಅನೇಕ ಗ್ರಾಪಂಗಳಿಗೆ ಚುನಾವಣೆ ಘೋಷಣೆ: ಅಕ್ಟೋಬರ್‌ 28ರಂದು ಮತದಾನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement