ಉತ್ತರಾಖಂಡ: ರೆಸಾರ್ಟ್‌ ರಿಸೆಪ್ಶನಿಸ್ಟ್‌ ಕೊಲೆ ಆರೋಪದ ಮೇಲೆ ಬಿಜೆಪಿ ಮುಖಂಡನ ಪುತ್ರನ ಬಂಧನ-ಪೊಲೀಸರು

ಪೌರಿ: ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನಲ್ಲಿರುವ ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿ (receptionist)ಯಾಗಿ ಕೆಲಸ ಮಾಡುತ್ತಿದ್ದ 19 ವರ್ಷದ ಹುಡುಗಿಯನ್ನು ಕೊಂದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರೊಬ್ಬರ ಮಗನನ್ನು ಬಂಧಿಸಲಾಗಿದೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ರೆಸಾರ್ಟ್‌ನಲ್ಲಿರುವ ಇಬ್ಬರು ಉದ್ಯೋಗಿಗಳನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಹರಿದ್ವಾರದ ಬಿಜೆಪಿ ನಾಯಕ ವಿನೋದ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಎಂದು ಗುರುತಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ವಿನೋದ ಆರ್ಯ ಉತ್ತರಾಖಂಡದ ಮತಿ ಕಲಾ ಮಂಡಳಿಯ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ಅವರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗಿದೆ ಆದರೆ ಪ್ರಸ್ತುತ ಉತ್ತರಾಖಂಡ ಸರ್ಕಾರದಲ್ಲಿ ಯಾವುದೇ ಹುದ್ದೆ ನೀಡಿಲ್ಲ ಎಂದು ವರದಿಗಳು ತಿಳಿಸಿವೆ.

advertisement

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಇದೀಗ ಗದಗದಲ್ಲಿ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ ಹೊರತುಪಡಿಸಿ, ಇತರ ಇಬ್ಬರು – ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ಮ್ಯಾನೇಜರ್ ಅಂಕಿತ್ ಗುಪ್ತಾ – ಕಾಣೆಯಾದ ಹುಡುಗಿಯನ್ನು ಕೊಂದು ಆಕೆಯ ದೇಹವನ್ನು ಚೀಲಾ ಕಾಲುವೆಗೆ ಎಸೆದಿರುವುದಾಗಿ ಒಪ್ಪಿಕೊಂಡ ನಂತರ ಅವರನ್ನು ಬಂಧಿಸಲಾಗಿದೆ ಎಂದು ಪೌರಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಚಂದ್ರ ಸುಯಲ್ ತಿಳಿಸಿದ್ದಾರೆ.
ಆರೋಪಿಯು ಆರಂಭದಲ್ಲಿ ಪೊಲೀಸರನ್ನು ದಾರಿತಪ್ಪಿಸಲು ಯತ್ನಿಸಿದ್ದನಾದರೂ ಕಠಿಣ ವಿಚಾರಣೆಯ ನಂತರ ತಪ್ಪೊಪ್ಪಿಕೊಂಡಿದ್ದಾನೆ ಎಂದು ಎಎಸ್ಪಿ ತಿಳಿಸಿದ್ದಾರೆ. ಯುವತಿಯ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಕಂದಾಯ ಪೊಲೀಸರಿಂದ ಸಾಮಾನ್ಯ ಪೊಲೀಸರಿಗೆ ವರ್ಗಾವಣೆಗೊಂಡ ನಂತರ 24 ಗಂಟೆಗಳಲ್ಲಿ ಪ್ರಕರಣವನ್ನು ಭೇದಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಮೂವರನ್ನು ಕೋಟ್‌ದ್ವಾರ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೋಮವಾರ ಬೆಳಗ್ಗೆ ಆಕೆಯ ಕೊಠಡಿಯಲ್ಲಿ ಪತ್ತೆಯಾಗದ ಹಿನ್ನೆಲೆಯಲ್ಲಿ ಯುವತಿಯ ಪೋಷಕರು ಕಂದಾಯ ಪೊಲೀಸ್ ಹೊರಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಭಾರತದ ಕ್ರಿಕೆಟ್‌ ತಂಡಕ್ಕೆ ಆಘಾತ: ಬೆನ್ನು ನೋವಿನ ಸಮಸ್ಯೆ, ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್‌ನಿಂದ ಹೊರಕ್ಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement