ನಾಡಗೀತೆಗೆ ಕಾಲಮಿತಿ-ದಾಟಿ ನಿಗದಿ ಮಾಡಿದ ಸರ್ಕಾರ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದ ನಾಡಗೀತೆ ಹಾಡುವ ಅವಧಿ ಹಾಗೂ ದಾಟಿಯನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರಕವಿ ಕುವೆಂಪು ಬರೆದ ನಾಡಗೀತೆ “ಜಯ ಭಾರತ ಜನನಿಯ ತನುಜಾತೆʼ ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಿದ್ದೇವೆ. ಸಂಗೀತ ವಿದೂಷಿ ಎಸ್ ಆರ್. ಲೀಲಾವತಿ ಅಧ್ಯಕ್ಷತೆ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯ ದಾಟಿಯಲ್ಲಿ ಇನ್ನು ಮುಂದೆ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್ ನಲ್ಲಿ ಹಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಈ ಬಗ್ಗೆ ಟ್ವೀಟ್‌ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲಕುಮಾರ, ಕುವೆಂಪು ವಿರಚಿತ ನಾಡಗೀತೆ”ಜಯ ಭಾರತ ಜನನಿಯ ತನುಜಾತೆ”ಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡಲಾಗಿದೆ ಎಂದು ತಿಳಿಸಲು ಹರ್ಷವೆನಿಸುತ್ತಿದೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ಅವರ ರಾಗ ಸಂಯೋಜನೆಯ ದಾಟಿಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್‌ನಲ್ಲಿ ನಾಡಗೀತೆ ಹಾಡಲಾಗುತ್ತದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಳ: ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಒಮ್ಮತದ ಒಲವು - ಸಿ.ಟಿ. ರವಿ

2005ರಿಂದಲೂ ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ ಹಾಗೆಯೇ ಉಳಿದಿತ್ತು. ಕೆಲವೊಂದು ಕಾರ್ಯಕ್ರಮಗಳಲ್ಲಿ 7-8 ನಿಮಿಷಗಳ ಕಾಲ ಹಾಡಲಾಗುತ್ತಿತ್ತು. ಹೀಗಾಗಿ ದಾಟಿ ಹಾಗೂ ಕಾಲಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂದು ಒತ್ತಾಯವಿತ್ತು. ಇದೀಗ ನಾಡಗಿತೆ ದಾಟಿ ಹಾಗೂ ಕಾಲಿಮಿಯನ್ನು ಸರ್ಕಾರ ನಿಗದಿ ಮಾಡಿದ್ದು, ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ‘ಜಯ ಭಾರತ ಜನನಿಯ ತನುಜಾತೆ’ ಹಾಡುವ ಅವಧಿಯನ್ನು 2 ನಿಮಿಷ 30 ಸೆಕೆಂಡ್‌ಗೆ ನಿಗದಿ ಮಾಡಬೇಕು ಎಂದು ಶಿಫಾರಸು ಮಾಡಿತ್ತು, ಈಗ ರಾಜ್ಯ ಸರ್ಕಾರ ಶಿಫಾರಸು ಒಪ್ಪಿಕೊಂಡಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ದಸರಾ ಮೆರವಣಿಗೆ ವೇಳೆ ಪಾರಂಪರಿಕ ಮದರಸಾದಲ್ಲಿ ಪೂಜೆ, 9 ಜನರ ವಿರುದ್ಧ ಪ್ರಕರಣ ದಾಖಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement