ಬೆಂಗಳೂರಿನಲ್ಲಿ PayCM ಪೋಸ್ಟರ್‌ ಅಂಟಿಸಿದ ಕಾಂಗ್ರೆಸ್‌ ನಾಯಕರು

ಬೆಂಗಳೂರು: ಕಾಂಗ್ರೆಸ್ ನಾಯಕರು ಪೇ ಸಿಎಂ ಪೋಸ್ಟರ್ ವಿಷಯವನ್ನು ಮತ್ತಷ್ಟು ಹೈಪ್ ಮಾಡಿದ್ದಾರೆ. ಇಂದು, ಶುಕ್ರವಾರ ಸಂಜೆ ರೇಸ್ ಕೋರ್ಸ್ ಕಾಂಪೌಂಡ್‌ಗೆ ಪ್ರತಿಭಟನಾರ್ಥವಾಗಿ ಪೇ ಸಿಎಂ ಪೋಸ್ಟರ್ ಅಂಟಿಸಿದರು. ನಂತರ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಲಾಯಿತು.
ಇಂದು ಸಂಜೆ 4:45 ಗಂಟೆಗೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ವೋಲ್ವೋ ಕಚೇರಿ ಎದುರು ರೇಸ್ ಕೋರ್ಸ್ ಕಾಂಪೌಂಡ್ ಗೆ ಪ್ರತಿಭಟನಾರ್ಥವಾಗಿ ಪೇ ಸಿಎಂ ಪೋಸ್ಟರ್ ಅಂಟಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ ಮತ್ತಿತರ ಮುಖಂಡರು ಭಾಗವಹಿಸಿದ್ದರು.

ಈ ವೇಳೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಪೇ ಸಿಎಂ ಪೋಸ್ಟರ್ ಅನ್ನು ಅಂಟಿಸಿದರು. ಇದೇ ವೇಳೆ ಸ್ಥಳದಲ್ಲಿದ್ದ ಪೊಲೀಸರು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಇಡೀ ರಾಜ್ಯದಲ್ಲಿ ಈ ‘ಪೇ ಸಿಎಂ’ ಪೋಸ್ಟರ್ ಪ್ರತಿಭಟನೆ ಮುಂದುವರೆಯಲಿದೆ. ಇದು ಬಿಜೆಪಿ ಸರ್ಕಾರದ ಶೇ.40 ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಅಭಿಯಾನವಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement