ರಾಜ್ಯದಲ್ಲಿ ಮತ್ತೆ ವಿದ್ಯುತ್‌ ದರ ಏರಿಕೆ : ಅಕ್ಟೋಬರ್‌ 1ರಿಂದ ಅನ್ವಯ

posted in: ರಾಜ್ಯ | 0

ಬೆಂಗಳೂರು : ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಶಾಕ್​ ಕೊಟ್ಟಿದೆ. ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನಲೆಯಲ್ಲಿ ಇಂಧನ ಹೊಂದಾಣಿಕೆಯ ಶುಲ್ಕವನ್ನು ಅಕ್ಟೋಬರ್‌ 1ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ಆದೇಶ ಹೊರಡಿಸಿದೆ.
ಈ ಆದೇಶದಂತೆ ವಿದ್ಯುತ್ ದರ ಏರಿಕೆಯಾಗಲಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ. ಪ್ರತಿ ಯೂನಿಟ್‌ಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 43 ಪೈಸೆ, ಮೆಸ್ಕಾಂ ವ್ಯಾಪ್ತಿಯಲ್ಲಿ 24 ಪೈಸೆ, ಸೆಸ್ಕ್‌ –34 ಪೈಸೆ, ಹೆಸ್ಕಾಂ 35 ಪೈಸೆ ಮತ್ತು ಜೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕೇಂದ್ರ ವಿದ್ಯುಚ್ಛಕ್ತಿ ಉತ್ಪಾದನಾ ಕೇಂದ್ರ (CGS), ಕರ್ನಾಟಕ ವಿದ್ಯುಚ್ಛಕ್ತಿ ಉತ್ಪಾದನಾ ಕೇಂದ್ರ (KPCL) ಮತ್ತು ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ (UPCL) ನಿಂದ ಎಲ್ಲಾ ಎಸ್ಕಾಂಗಳು ವಿದ್ಯುತ್‌ ಖರೀದಿಸುತ್ತಿವೆ. ಏಪ್ರಿಲ್-2022 ರಿಂದ ಜೂನ್-2022 ರವರೆಗೆ 643 ಕೋಟಿ ರೂ.ಗಳಷ್ಟು ವಿದ್ಯುತ್‌ ಖರೀದಿ ವೆಚ್ಚ ಹೆಚ್ಚಳವಾಗಿದ್ದು, 80 ಪೈಸೆ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕವನ್ನು ವಸೂಲಿ ಮಾಡಲು ಬೆಸ್ಕಾಂ ಕೆಇಆರ್‌ ಸಿಗೆ ಆಗಸ್ಟ್‌ 30ರಂದು ಅರ್ಜಿ ಸಲ್ಲಿಸಿತ್ತು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ತೆಲಂಗಾಣ ಸಿಎಂರಿಂದ ನಾಳೆ ರಾಷ್ಟ್ರೀಯ ಪಕ್ಷ ಘೋಷಣೆ : ಶಾಸಕರ ಜೊತೆ ಹೈದರಾಬಾದ್ ತೆರಳಿದ ಹೆಚ್​ಡಿಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

2 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement