ಹೆಚ್ಎಎಲ್‌ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

posted in: ರಾಜ್ಯ | 0

ಹುಬ್ಬಳ್ಳಿ : ಬೆಂಗಳೂರಿನ ಹಿಂದುಸ್ಥಾನ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್‌)ನಲ್ಲಿ ವಿವಿಧ ವೃತ್ತಿಗಳಲ್ಲಿ ಅಕ್ಟೋಬರ್ ತಿಂಗಳಿಂದ ಪ್ರಾರಂಭವಾಗಲಿರುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಹಾಗೂ ಐ.ಟಿ.ಐ ಟ್ರೇಡ್‌ಗಳಾದ ಫಿಟ್ಟರ್, ಟರ್ನರ್, ಮಷಿನಿಸ್ಟ್‌, ಶೀಟ್‌ಮೆಟಲ್ ವರ್ಕರ್‌, ಪೌಂಡ್ರಿಮನ್, ಇಲೆಕ್ಟ್ರೀಷಿಯನ್, ವೆಲ್ಡರ್, ಕೋಪಾ, ಸಿಓಪಿಎಗಳಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ಅಭ್ಯರ್ಥಿಗಳು  http://www.apprenticeship.gov.inಅಪ್ರೆಂಟಿಸ್ ಶಿಪ್ ಪೋರ್ಟಲ್ ನಲ್ಲಿ ಅಪ್ರೆಂಟಿಸ್ ಎಂದು ನೋಂದಾಯಿಸಿಕೊಂಡು, ನೋಂದಣಿ ಸಂಖ್ಯೆ ಪಡೆದುಕೊಂಡಿರಬೇಕು. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳು, ಜಾತಿ ಪ್ರಮಾಣ ಪತ್ರ, ಆಧಾರ ಕಾರ್ಡ್ ಹಾಗೂ ಉದ್ಯೋಗ ವಿನಿಮಯ ಕೇಂದ್ರದ ನೋಂದಣಿ ಗುರುತಿನ ಪತ್ರದ ಜೊತೆ 3 ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರಗಳೊಂದಿಗೆ ಅಕ್ಟೋಬರ್ 3ರ ಒಳಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ನವನಗರ ಹುಬ್ಬಳ್ಳಿಗೆ ಅರ್ಜಿ ಸಲ್ಲಿಸಬೇಕು.
ಮಾಹಿತಿಗೆ ದೂರವಾಣಿ ಸಂಖ್ಯೆ 0836-2225288 ಹಾಗೂ ನಿಗದಿತ ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ನವನಗರ, ಹುಬ್ಬಳ್ಳಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರಾದ ಗಿರೀಶ್ ಕೆ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಭಾರತದ ಎಲ್ಲ ರಾಜ್ಯಗಳು, ಅನೇಕ ದೇಶಗಳನ್ನು ಹೆಸರನ್ನು ಭೂಪಟ-ಧ್ವಜ ನೋಡಿಯೇ ಹೇಳುವ 18 ತಿಂಗಳ ಪುಟ್ಟಪೋರ ಅನಿಕೇತ ಭಟ್‌...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement