ಎಸ್​ಬಿಐನಲ್ಲಿ 1673 ಪ್ರೋಬೇಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ (State Bank Of India) 1673 ಪ್ರೋಬೇಷನರಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್​ ವಲಯದಲ್ಲಿ ಆಸಕ್ತಿ ಹೊಂದಿರುವ ಪದವೀಧರ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಅಕ್ಟೋಬರ್​​ 12 ಆಗಿದೆ. 1600 ಹುದ್ದೆಗಳು ಸಾಮಾನ್ಯವಾಗಿದ್ದು, 73 ಬ್ಯಾಕ್​ಲಾಗ್​ ಹುದ್ದೆಗಳಾಗಿವೆ.
ಬ್ಯಾಂಕ್ ಹೆಸರು -ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ಹುದ್ದೆಯ ಹೆಸರು: ಪ್ರೊಬೇಷನರಿ ಅಧಿಕಾರಿಗಳು (PO)
ಹುದ್ದೆಗಳ ಸಂಖ್ಯೆ -1673
ಉದ್ಯೋಗ ಸ್ಥಳ -ಅಖಿಲ ಭಾರತ
ಮಾಸಿಕ ವೇತನ 36000-63840 ರೂ.ಗಳು

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳು.
ಅರ್ಜಿ ಸಲ್ಲಿಕೆ: ಆನ್​ಲೈನ್​
ಅರ್ಜಿ ಶುಲ್ಕ:ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 750 ರೂ.ಗಳು
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಹೇಗೆ…?; ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ಮಾಹಿತಿಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಸೆಪ್ಟೆಂಬರ್​ 2022
ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ: 12 ಅಕ್ಟೋಬರ್​ 2022
ಇವು ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ ನೋಡಬಹುದುsbi-po-Advt_English
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ ನೋಡಬಹುದು
ಅಧಿಕೃತ ವೆಬ್‌ಸೈಟ್: sbi.co.in

ಪ್ರಮುಖ ಸುದ್ದಿ :-   ನೀವು ಅಮಾಯಕರಲ್ಲ : ಬಾಬಾ ರಾಮದೇವ, ಆಚಾರ್ಯ ಬಾಲಕೃಷ್ಣಗೆ ಸುಪ್ರೀಂ ಕೋರ್ಟ್‌ ಮತ್ತೆ ತರಾಟೆ

 

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement