15,000 ಶಿಕ್ಷಕರ ಹುದ್ದೆಯ ನೇಮಕಾತಿ: ವಾರಾಂತ್ಯದೊಳಗೆ ಅರ್ಹ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ 15,000 ಶಿಕ್ಷಕರ ಹುದ್ದೆಯ ನೇಮಕಾತಿ ಸಂಬಂಧ ಮುಂದಿನ ವಾರಾಂತ್ಯದೊಳಗೆ ಅರ್ಹ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿನಾಗೇಶ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, 15,000 ಶಿಕ್ಷಕರ ಹುದ್ದೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
15,000 ಶಿಕ್ಷಕರ ಹುದ್ದೆಯ ಭರ್ತಿಯ ಬಳಿಕ ಮತ್ತೆ 2,500 ಶಿಕ್ಷಕರ ಹುದ್ ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವರು ಈಗಾಗಲೇ ತಿಳಿಸಿದ್ದಾರೆ.

ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100 ಹುದ್ದೆಗಳಿಗೂ ಶೀಘ್ರವೇ ಅಧಿಸೂಚನೆ ಹೊರ ಬೀಳಲಿದೆ ಎಂದು ಕೆಲದಿನಗಳ ಹಿಂದೆ ಅವರು ಟ್ವೀಟ್‌ ಮೂಲಕ ತಿಳಿಸಿದ್ದರು.

ಪ್ರಮುಖ ಸುದ್ದಿ :-   ಪೆನ್‌ ಡ್ರೈವ್ ಪ್ರಕರಣ : 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್‌ , ಎಚ್‌ಡಿ ರೇವಣ್ಣಗೆ ಎಸ್‌ಐಟಿ ನೋಟಿಸ್‌ ; ವರದಿ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement