ಜಲ ಸಂಪನ್ಮೂಲ ಇಲಾಖೆ 155 ಎಸ್​ಡಿಎ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ರಾಜ್ಯ ಜಲ ಸಂಪನ್ಮೂಲ ವಿಭಾಗದಲ್ಲಿ (Water Resources Department) 155 ಬ್ಯಾಕ್​ಲಾಗ್​ ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೇಮಕಾತಿಗೆ ನೀಡಿದ್ದ ತಡೆಯನ್ನು ರದ್ದು ಪಡಿಸಿ ಸರ್ಕಾರ ಈಗ ಮತ್ತೆ ಹೊಸದಾಗಿ ಅಧಿಸೂಚನೆ ಹೊರಡಿಸಿದೆ. ಗ್ರೂಪ್​ ಸಿ ವೃಂದದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್​ 25 ರೊಳಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿಶೇಷ ಸೂಚನೆ ಅನುಸಾರ ಈ ಬ್ಯಾಕ್​ಲಾಗ್​ ಹುದ್ದೆಗಳ ಭರ್ತಿಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದಿಲ್ಲ. 2001ರ ವಿಶೇಷ ನೇಮಕಾತಿ ನಿಯಮಗಳ ಅನುಸಾರ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳು ಮತ್ತು ವಯೋಮಿತಿ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

ಸಂಸ್ಥೆ-ಜಲಸಂಪನ್ಮೂಲ ಇಲಾಖೆ ಕರ್ನಾಟಕ
ಹುದ್ದೆಗಳ ಸಂಖ್ಯೆ-155
ಉದ್ಯೋಗ ಸ್ಥಳ-ಬೆಂಗಳೂರು
ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕರು
ಮಾಸಿಕ ವೇತನ 21400-42000 ರೂ.ಗಳು
ಶೈಕ್ಷಣಿಕ ಅರ್ಹತೆ: ಜಲಸಂಪನ್ಮೂಲ ಇಲಾಖೆ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, 10+2, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ ಮಿತಿ: ಜಲಸಂಪನ್ಮೂಲ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ದಾಟಿರಬಾರದು.
ವಯೋಮಿತಿ ಸಡಿಲಿಕೆ: ವಿಕಲಚೇತನ/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ
ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ವಯೋಮಿತಿ ಮತ್ತು ಶೈಕ್ಷಣಿಕ ವಿದ್ಯಾರ್ಹತೆಯ ಮೆರಿಟ್

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಅಭ್ಯರ್ಥಿಗಳು ಸೆಪ್ಟೆಂಬರ್​ 26ರಿಂದ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಂದಿನಿಂದ ನೇಮಕಾತಿ ಲಿಂಕ್​ ಪ್ರಾರಂಭವಾಗುತ್ತದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26 ಸೆಪ್ಟೆಂಬರ್​
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಅಕ್ಟೋಬರ್​
ಅಧಿಸೂಚನೆ ಮುಖ್ಯ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್​ ಮಾಡಿ –Notification_SDA_BacklogSC_23_09_22 (1)
ಅಧಿಕೃತ ವೆಬ್‌ಸೈಟ್: waterresources.karnataka.gov.in

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement