ಹುಬ್ಬಳ್ಳಿ: “ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಲಾಗಿದ್ದು, ಅವರು ಕಾರ್ಮಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾಯವ್ಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ.
ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ತಮ್ಮ ವಾಸಸ್ಥಳದಿಂದ ಗರಿಷ್ಟ್ 45 ಕಿ.ಮೀ ವರೆಗೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬಸ್‌ಪಾಸ್ ವಿತರಣೆಯ ಪ್ರಕ್ರಿಯೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸೆಪ್ಟೆಂಬರ್ 20ರಂದು ಇದಕ್ಕೆ ಚಾಲನೆ ನೀಡಿದ್ದು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರರು ಈ ಸೌಲಭ್ಯ ಪಡೆಯಬಹುದಾಗಿದೆ.
“ನೋಂದಾಯಿತ ಕಟ್ಟಡ ಕಾರ್ಮಿಕರು ಕಾರ್ಮಿಕ ಇಲಾಖೆಯ ನೋಂದಾಯಿತ ಗುರುತಿನ ಚೀಟಿ/ಮಾಹಿತಿಯೊಂದಿಗೆ ಸ್ಥಳಿಯ ಗ್ರಾಮ-1 ಅಥವಾ ಕರ್ನಾಟಕ-1 ಕೇಂದ್ರವನ್ನು ಸಂಪರ್ಕಿಸಿ “ಈ ಬಸ್ ಪಾಸ್ ಸೌಲಭ್ಯ ಪಡೆಯಬಹುದಾಗಿದೆ. ಕಾರ್ಮಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ