ಒಎನ್​ಜಿಸಿಯಲ್ಲಿ 871 ಹುದ್ದೆಗಳಿಗೆ ಅರ್ಜಿ ಆಹ್ವಾನ

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(Oil and Natural Gas Corporation)ದ ಎಇಇ, ಪ್ರೋಗ್ರಾಮಿಂಗ್​ ಆಫೀಸರ್​ 871 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 12 ಆಗಿದೆ.
ಸಂಸ್ಥೆ- ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)
ಹುದ್ದೆಯ ಹೆಸರು – ಎಇಇ ಹಾಗೂ ಪ್ರೋಗ್ರಾಮಿಂಗ್ ಆಫೀಸರ್
ಹುದ್ದೆಗಳ ಸಂಖ್ಯೆ -871
ಉದ್ಯೋಗ ಸ್ಥಳ ಅಖಿಲ ಭಾರತ
ಮಾಸಿಕ ವೇತನ 60000-180000 ರೂ.ಗಳು

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆ ಅನುಸಾರ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರಬೇಕು.
ವಯೋಮಿತಿ: ಅಧಿಕೃತ ಅಧಿಸೂಚನೆ ಅನುಸಾರ ಅಭ್ಯರ್ಥಿಯು ಕನಿಷ್ಟ 18 ಮತ್ತು ಗರಿಷ್ಟ 30 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕರಿಗೆ 5 ವರ್ಷಗಳು ಹಾಗೂ ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು, ವಿಕಲಚೇತನರಿಗೆ 10 ವರ್ಷಗಳು
ಅರ್ಜಿ ಶುಲ್ಕ: ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 300 ರೂ.
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ, ಗೇಟ್-2022 ಅಂಕಗಳು ಮತ್ತು ಸಂದರ್ಶನ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಸೆಪ್ಟೆಂಬರ್​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಅಕ್ಟೋಬರ್ 2022
ಮಹತ್ವದ ಲಿಂಕ್‌ಗಳು;
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ನೋಡಬಹುದು-ongc-advt
ಅಧಿಕೃತ ವೆಬ್‌ಸೈಟ್: http://ongcindia.com

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ...!

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement