ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್‌ 30ರಂದು ಶಶಿ ತರೂರ್‌ ನಾಮಪತ್ರ ಸಲ್ಲಿಕೆ ?

ನವದೆಹಲಿ: ಸಂಸದ ಶಶಿ ತರೂರ್ ಅವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್‌ 30ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತರೂರ್ ಅವರು ವಿವಿಧ ರಾಜ್ಯಗಳ ಪ್ರತಿನಿಧಿಗಳನ್ನು ಸಂಪರ್ಕಿಸುತ್ತಿದ್ದು, ಐದು ಸೆಟ್ ನಾಮನಿರ್ದೇಶನ ಪತ್ರಗಳನ್ನು ತೆಗೆದುಕೊಂಡಿದ್ದಾರೆ. ತರೂರ್ ಅವರ ಸಹಾಯಕ ಆಲಿಂ ಜವೇರಿ ಅವರು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಯ ಅಧ್ಯಕ್ಷ ಮಧುಸೂದನ್‌ ಮಿಸ್ತ್ರಿ ಅವರ ಕಚೇರಿಗೆ ಹೋಗಿ ಅರ್ಜಿಗಳನ್ನು ಪಡೆದಿದ್ದಾರೆ. 10 ಪ್ರದೇಶ ಕಾಂಗ್ರೆಸ್‌ ಸಮಿತಿಗಳ ಪ್ರತಿನಿಧಿಗಳು ಅಭ್ಯರ್ಥಿಯನ್ನು ಅನುಮೋದಿಸಿ ಸಹಿ ಹಾಕಬೇಕಾಗುತ್ತದೆ. ಈ ಕಾರ್ಯಕ್ಕಾಗಿ ತರೂರ್‌ ಅವರಿಗೆ ಕೆಲ ದಿನಗಳು ಬೇಕಾಗುವುದರಿಂದ ಅವರು ಸೆಪ್ಟೆಂಬರ್‌ 30ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಮ್ಮ ಉಮೇದುವಾರಿಕೆಯನ್ನು ಘೋಷಿಸಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಪಕ್ಷದ ಅಧ್ಯಕ್ಷರ ಹುದ್ದೆ ಸ್ಪರ್ಧೆಗೆ ಕಾಂಗ್ರೆಸ್ ಸಿದ್ಧವಾಗಿದೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದಿರಲು ನಿರ್ಧರಿಸಿದ ನಂತರ, 24 ವರ್ಷಗಳ ನಂತರ ಗಾಂಧಿಯೇತರರು ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ.
2017 ಮತ್ತು 2019 ರ ನಡುವಿನ ಎರಡು ವರ್ಷಗಳನ್ನು ಹೊರತುಪಡಿಸಿ 1998 ರಿಂದ ರಾಹುಲ್ ಗಾಂಧಿಯವರಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು.

ಪ್ರಮುಖ ಸುದ್ದಿ :-   ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement