ಚಂಡೀಗಡ ವಿಮಾನ ನಿಲ್ದಾಣಕ್ಕೆ ಶಹೀದ್‌ ಭಗತ್ ಸಿಂಗ್ ಹೆಸರು: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮಾಸಿಕ ‘ಮನ್ ಕಿ ಬಾತ್’ ರೇಡಿಯೊ ಕಾರ್ಯಕ್ರಮದಲ್ಲಿ, ಸೆಪ್ಟೆಂಬರ್ 28 ರಂದು ಶಹೀದ್ ಭಗತ್ ಸಿಂಗ್ ಅವರ ಜನ್ಮದಿನದ ಸಂದರ್ಭದಲ್ಲಿ ಚಂಡೀಗಢ ವಿಮಾನ ನಿಲ್ದಾಣಕ್ಕೆ ಅವರ ಹೆಸರನ್ನು ಇಡಲಾಗುವುದು ಎಂದು ಪ್ರಕಟಿಸಿದ್ದಾರೆ.
ತಮ್ಮ ರೇಡಿಯೋ ಭಾಷಣದಲ್ಲಿ ಪ್ರಧಾನಿ ಮೋದಿ, “ನನ್ನ ಪ್ರೀತಿಯ ದೇಶವಾಸಿಗಳೇ, ಮೂರು ದಿನಗಳ ನಂತರ, ಅಂದರೆ ಸೆಪ್ಟೆಂಬರ್ 28 ರಂದು ಅಮೃತ ಮಹೋತ್ಸವದ ವಿಶೇಷ ದಿನವಾಗಿದೆ. ಈ ದಿನ ನಾವು ಭಾರತಮಾತೆಯ ವೀರ ಪುತ್ರ ಭಗತ್ ಸಿಂಗ್ ಅವರ ಜನ್ಮದಿನವನ್ನು ಆಚರಿಸುತ್ತೇವೆ. ಅವರ ಜನ್ಮ ವಾರ್ಷಿಕೋತ್ಸವದ ಮೊದಲು, ಗೌರವಾರ್ಥವಾಗಿ, ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ, ಚಂಡೀಗಢ ವಿಮಾನ ನಿಲ್ದಾಣಕ್ಕೆ ಶಹೀದ್ ಭಗತ್ ಸಿಂಗ್ ಹೆಸರಿಡಲು ನಿರ್ಧರಿಸಲಾಗಿದೆ” ಎಂದು ಮೋದಿ ಹೇಳಿದರು

ಹಿಂದಿನ ಭಾರತೀಯ ಜನಸಂಘದ ನಾಯಕ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನವಾದ ಇಂದು, ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ತಮ್ಮ ಮನ್ ಕಿ ಬಾತ್ ರೇಡಿಯೋ ಪ್ರಸಾರದಲ್ಲಿ, ಹವಾಮಾನ ಬದಲಾವಣೆಯು ಸಮುದ್ರ ಪರಿಸರ ವ್ಯವಸ್ಥೆಗಳಿಗೆ ದೊಡ್ಡ ಅಪಾಯವಾಗಿದೆ ಮತ್ತು ಕಡಲತೀರಗಳಲ್ಲಿನ ಕಸವು ತೊಂದರೆ ಮಾಡುತ್ತಿದೆ.”ಈ ಸವಾಲುಗಳನ್ನು ಎದುರಿಸಲು ಗಂಭೀರ ಮತ್ತು ನಿರಂತರ ಪ್ರಯತ್ನಗಳನ್ನು ಮಾಡುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಎಂದು ಮೋದಿ ಹೇಳಿದರು.
130 ಕೋಟಿ ಭಾರತೀಯರು ಚಿರತೆಗಳ ವಾಪಸಾತಿ ಬಗ್ಗೆ ಹೆಮ್ಮೆಪಟ್ಟಿದ್ದಾರೆ. ಕಾರ್ಯಪಡೆ ಅವರ ಮೇಲೆ ನಿಗಾ ಇಡುತ್ತದೆ ಮತ್ತು ಅದರ ಆಧಾರದ ಮೇಲೆ ಜನರು ಯಾವಾಗ ನೋಡಬಹುದು ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ಮೋದಿ ಹೇಳಿದರು.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

2 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement