ತಮಿಳುನಾಡು: ಆರ್‌ಎಸ್‌ಎಸ್‌ ಕಾರ್ಯಕರ್ತರ ನಿವಾಸದ ಮೇಲೆ ಪೆಟ್ರೋಲ್‌ ಬಾಂಬ್‌ ಎಸೆದ ದುಷ್ಕರ್ಮಿಗಳು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚೆನ್ನೈ: ಶನಿವಾರ  ಚೆನ್ನೈನ ತಾಂಬರಂ ಬಳಿ ಆರ್‌ಎಸ್‌ಎಸ್ ಪ್ರಮುಖರೊಬ್ಬರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚೆನ್ನೈ ಸಮೀಪದ ತಾಂಬರಂನ ಚಿಟ್ಲಪಾಕ್ಕಂನಲ್ಲಿರುವ ಆರ್‌ಎಸ್‌ಎಸ್ ಪ್ರಮುಖ ಸೀತಾರಾಮನ್ ಅವರ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಪೆಟ್ರೋಲ್ ಬಾಂಬ್ ಎಸೆದ ಇಬ್ಬರು ಅಪರಿಚಿತ ವ್ಯಕ್ತಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಾಂಬರಂ ಪೊಲೀಸರು ತಿಳಿಸಿದ್ದಾರೆ.
ಬೆಳಿಗ್ಗೆ 4 ಗಂಟೆಗೆ, ನಾವು ದೊಡ್ಡ ಶಬ್ದವನ್ನು ಕೇಳಿದೆವು ಮತ್ತು ಹೊರಗೆ ಬೆಂಕಿ ಉರಿಯುತ್ತಿದೆ ಎಂದು ಗೊತ್ತಾಯಿತು ಎಂದು ಸೀತಾರಾಮನ್ ತಿಳಿಸಿದ್ದಾರೆ. “ನಾವು ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಶಂಕಿಸಿದೆವು, ಆದರೆ ನಂತರ ಅದಲ್ಲ ಎಂಬುದು ಗೊತ್ತಾಯಿತು. ನಾವು ಬೆಂಕಿಯನ್ನು ನಂದಿಸಿ ಪೊಲೀಸರಿಗೆ ಕರೆ ಮಾಡಿದೆವು. ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಸೀತಾರಾಮನ್ ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ ಮಧುರೈನ ಮೆಲ್ ಅನುಪ್ಪನಾಡಿ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ವ್ಯಕ್ತಿಯೊಬ್ಬ ಮನೆಯತ್ತ ಓಡಿ ಮೂರು ಪೆಟ್ರೋಲ್ ಬಾಂಬ್ ಎಸೆದಿರುವುದು ವೀಡಿಯೊದಲ್ಲಿದೆ. ಅವರ ಸಹಚರ ದ್ವಿಚಕ್ರ ವಾಹನದಲ್ಲಿ ಸಮೀಪದಲ್ಲಿದ್ದ ಮತ್ತು ಇಬ್ಬರೂ ತಕ್ಷಣವೇ ಪರಾರಿಯಾಗಿದ್ದಾರೆ. ಸಿಸಿಟಿವಿ ಫೂಟೇಜ್ 7:38 ರ ಟೈಮ್‌ಸ್ಟ್ಯಾಂಪ್ ಅನ್ನು ತೋರಿಸುತ್ತದೆ.
ಘಟನೆಯ ಕುರಿತು ತನಿಖೆ ನಡೆಯುತ್ತಿದೆ. “ಆರೆಸ್ಸೆಸ್ ಸದಸ್ಯರ ಮನೆಯ ಮೇಲೆ ಮೂರು ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗಿದೆ ಮತ್ತು ನಾವು ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದೇವೆ. ಯಾರೂ ಗಾಯಗೊಂಡಿಲ್ಲ ಎಂದು ಮಧುರೈ ದಕ್ಷಿಣದ ಸಹಾಯಕ ಕಮಿಷನರ್ ಷಣ್ಮುಗಂ ತಿಳಿಸಿದ್ದಾರೆ.

ಆರ್‌ಎಸ್‌ಎಸ್ ಸದಸ್ಯ ಕೃಷ್ಣನ್ ಮತ್ತು ಬಿಜೆಪಿ ಮಧುರೈ ಜಿಲ್ಲಾಧ್ಯಕ್ಷ ಸುಸೀಂದ್ರನ್ ಕೂಡ ಕೀರತುರೈ ಪೊಲೀಸರಿಗೆ ದೂರು ನೀಡಿದ್ದಾರೆ.
NIA ಮತ್ತು ED ರಾಷ್ಟ್ರವ್ಯಾಪಿ ದಾಳಿಗಳನ್ನು ನಡೆಸಿ ಹಲವಾರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನಾಯಕರನ್ನು ಬಂಧಿಸಿದಾಗಿನಿಂದ, ಹಲವೆಡೆ ಪಿಎಫ್‌ಐ ಕಾರ್ಯಕರ್ತರು ಹಿಂಸಾಚಾರಕ್ಕೆ ಮುಂದಾಗಿದ್ದಾರೆ. ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಎನ್‌ಐಎ ರಾಜ್ಯಾದ್ಯಂತ ದಾಳಿ ನಡೆಸಿ ಬಂಧಿಸಿರುವುದನ್ನು ಪ್ರತಿಭಟಿಸಿ ಪಿಎಫ್‌ಐ ಶುಕ್ರವಾರ ‘ಕೇರಳ ಬಂದ್’ಗೆ ಕರೆ ನೀಡಿತ್ತು.
ತಮಿಳುನಾಡಿನ ಕೊಯಮತ್ತೂರಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಧ್ವಂಸ ಘಟನೆ ನಡೆದಿದೆ. ಕೆಲವರು ಕಚೇರಿಗೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಇದಲ್ಲದೇ ಕೇರಳದ ಕಣ್ಣೂರಿನ ಮಟ್ಟನೂರಿನಲ್ಲಿರುವ ಆರ್‌ಎಸ್‌ಎಸ್ ಕಚೇರಿ ಮೇಲೆ ಇಬ್ಬರು ವ್ಯಕ್ತಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.

ಪ್ರಮುಖ ಸುದ್ದಿ :-   ಉತ್ತಮ ಪ್ರತಿಕ್ರಿಯೆ, ಜನರು ದಾಖಲೆ ಸಂಖ್ಯೆಯಲ್ಲಿ ಎನ್‌ಡಿಎಗೆ ಮತ ಹಾಕಿದ್ದಾರೆ : ಲೋಕಸಭೆ ಚುನಾವಣೆ 1ನೇ ಹಂತದ ಮತದಾನದ ಬಗ್ಗೆ ಪ್ರಧಾನಿ ಮೋದಿ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement