ನನ್ನ ಕೈಯಲ್ಲಿ ಏನೂ ಇಲ್ಲ, ಶಾಸಕರು ಸಿಟ್ಟುಗೊಂಡಿದ್ದಾರೆ : ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿನ ಬಗ್ಗೆ ಅಶೋಕ ಗೆಹ್ಲೋಟ್

ನವದೆಹಲಿ: ರಾಜಸ್ಥಾನದ ಕಾಂಗ್ರೆಸ್‌ನ 90ಕ್ಕೂ ಹೆಚ್ಚು ಶಾಸಕರು ಭಾನುವಾರ ರಾತ್ರಿ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದು, ಅದು ಈಗ ತನ್ನ ಕೈಯಲ್ಲಿಲ್ಲ ಎಂದು ಅಶೋಕ್ ಗೆಹ್ಲೋಟ್ ಪಕ್ಷದ ಕೇಂದ್ರ ನಾಯಕತ್ವಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.
ಶಾಸಕರು ಸ್ಪೀಕರ್ ಅವರನ್ನು ಭೇಟಿ ಮಾಡಿ ಅಶೋಕ್ ಗೆಹ್ಲೋಟ್ ಅವರ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ರಾಜೀನಾಮೆ ನೀಡುವುದಾಗಿ ಹೇಳಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಈ ಬೆಳವಣಿಗೆ ನಂತರ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿಗೆ ನಿಕಟವಾಗಿರುವ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಗೆಹ್ಲೋಟ್, “ನನ್ನ ಕೈಯಲ್ಲಿ ಏನೂ ಇಲ್ಲ” ಎಂದು ಹೇಳಿದರು ಎಂದು ಮೂಲಗಳು ತಿಳಿಸಿವೆ.
ಕೇಂದ್ರ ನಾಯಕರ ಆಯ್ಕೆಯೆಂದು ನಂಬಲಾದ ಸಚಿನ್ ಪೈಲಟ್ ಬದಲಿಗೆ ಗೆಹ್ಲೋಟ್ ಅಥವಾ ಅವರ ಆಯ್ಕೆ ಮುಖ್ಯಮಂತ್ರಿಯಾಗಬೇಕೆಂದು ಶಾಸಕರು ಬಯಸುತ್ತಾರೆ. 2020 ರಲ್ಲಿ ಸಚಿನ್ ಪೈಲಟ್ ಅವರ ಬಂಡಾಯ ಎದ್ದರು ಮತ್ತು ಆ ಸಮಯದಲ್ಲಿ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸಿದವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಶಾಸಕರು ಹೇಳುತ್ತಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ...!

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement