ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಸಾವು

ಶಿವಮೊಗ್ಗ: ಹನ್ನೊಂದು ತಿಂಗಳ ಮಗು ನೀರಿನ ತೊಟ್ಟಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಜೋಗಿಹಳ್ಳಿಯ ಛಾಯಾಗ್ರಾಹಕ ದೇವರಾಜ ಹಾಗೂ ಅನುಷಾ ದಂಪತಿಯ 11 ತಿಂಗಳ ಮಗ ಅಕ್ಷಯ ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಅಸುನೀಗಿದೆ. ಭಾನುವಾರ ಮಹಾಲಯ ಅಮವಾಸ್ಯೆ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಾಹನ ತೊಳೆಯುವುದು ಹಾಗೂ ಪೂಜೆ ಪುನಸ್ಕಾರದಲ್ಲಿ ನಿರತರಾಗಿದ್ದರು. ಆ ವೇಳೆ ಅಂಬೆಗಾಲಿಡುತ್ತಿದ್ದ ಮಗು ನೀರಿನ ತೊಟ್ಟಿಗೆ ಬಿದ್ದಿದೆ. ಸ್ವಲ್ಪ ಹೊತ್ತಿನ ನಂತರ ಮಗುವಿನ ತಾತ ವಾಹನ ತೊಳೆಯಲು ತೊಟ್ಟಿಯಲ್ಲಿ ಬಗ್ಗಿದಾಗ ಮಗುವನ್ನು ಕಂಡು ಕಂಗಾಲಾಗಿದ್ದಾರೆ. ತಕ್ಷಣವೇ ಮಗುವನ್ನು ಎತ್ತಿಕೊಂಡುಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನವಾಗಿಲ್ಲ. 11 ತಿಂಗಳ ಮಗು ಅಕ್ಷಯ್ ಮೊದಲ ವರ್ಷದ ಜನ್ಮದಿನ ಆಚರಿಸಿಕೊಳ್ಳುವ ಮುನ್ನವೇ ಅಸುನೀಗಿದೆ.

3 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement