ಮಾಜಿ ಸಿಎಂ ಎಸ್‌ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.
ಶನಿವಾರ ಸಂಜೆ ಎಸ್ ಎಂ ಕೃಷ್ಣ ಅವರಿಗೆ ಜ್ವರ ಕಾಣಿಸಿಕೊಂಡಿದೆ, ಈ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಹತ್ತಿರದ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಆದರೆ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.  ಶ್ವಾಸ್ವಕೋಶದಲ್ಲಿ ಸೋಂಕು ಕಂಡುಬಂದಿದೆ. ಎಸ್‌ಎಂಕೆಗೆ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಮಣಿಪಾಲ್ ದಾಖಲು ಮಾಡಲಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

3 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement