ಮಾಜಿ ಸಿಎಂ ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಚೇತರಿಕೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಎರಡು, ‌ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಅವರು ಮನೆಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು, ಭಾನುವಾರ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಎಸ್.ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಎಸ್ ಎಂ ಕೃಷ್ಣ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.
ನಿರಂತರ ಚಿಕಿತ್ಸೆಯಿಂದ ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ಮೂರು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗುತ್ತಾರೆ. ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಬೊಮ್ಮಾಯಿ ಹೇಳಿದರು.

2 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿಧಾನ ಪರಿಷತ್ ಚುನಾವಣೆ; 4 ಕ್ಷೇತ್ರಗಳಲ್ಲಿ ಎರಡರಲ್ಲಿ ಎನ್‌ಡಿಎ ಗೆಲುವು, ಉಳಿದ ಎರಡರಲ್ಲೂ ಗೆಲುವು ಬಹುತೇಕ ಖಚಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement