ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಪೇಜಾವರ ಸ್ವಾಮೀಜಿ ಭೇಟಿ

ಬೆಂಗಳೂರು: ಅನಾರೋಗ್ಯದ ಕಾರಣ ವೈದ್ಯರ ಸಲಹೆಯಂತೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರ ಪದ್ಮನಾಭ ನಗರದ ಮನೆಗೆ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಫಲ ತಾಂಬೂಲ ನೀಡಿದರು. ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ನಾನು ಆರೋಗ್ಯವಾಗಿದ್ದೇನೆ ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೇನೆ. ವೈದ್ಯರ ಸಲಹೆಯಂತೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ಪದ್ಮನಾಭನಗರದ ನಿವಾಸಕ್ಕೆ ಭೇಟಿ ನೀಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು, ದೇವೇಗೌಡರ ಆರೋಗ್ಯದ ಬಗ್ಗೆ ವಿಚಾರಿಸಿದರು.

3 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement