ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ಹೆಸರು ಬದಲಾವಣೆ ಮಾಡಿದ ಸರ್ಕಾರ

ಬೆಂಗಳೂರು: ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ (SSLC) ಹಾಗೂ ಪಿಯು ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ಅನುಮೋದನೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಈಗ ರಾಜ್ಯ ಸರ್ಕಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರು ಬದಲಾವಣೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ಈಗ ರಾಜ್ಯ ಸರ್ಕಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಮರುನಾಮಕರಣಗೊಳಿಸಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರಿಕೆ (ಗೆಜೆಟ್ ಅಧಿಸೂಚನೆ) ಹೊರಡಿಸಲಾಗಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ತಿದ್ದುಪಡಿ ) ಅಧಿನಿಯಮಕ್ಕೆ ತಿದ್ದುಪಡಿ ತರಲಾಗಿದೆ. ಅದರ ಅನುಸಾರ ಮೂಲ ಅಧಿನಿಯಮದಲ್ಲಿದ್ದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಂಬ ಪದಗಳ ಬದಲಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಂಬ ಪದಗಳನ್ನು ಪ್ರತಿಯೋಜಿಸುವಂತೆ ಸೂಚಿಸಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮಂಡಳಿಯ ಪದನಿಮಿತ್ತ ಅಧ್ಯಕ್ಷರಾಗಿರಬೇಕು ಎಂಬ ಪದಗಳ ಬದಲಿಗೆ, ಮಂಡಳಿಯ ಅಧ್ಯಕ್ಷರನ್ನು ಸರ್ಕಾರವು ಐಎಎಸ್ ವೃಂದದಿಂದ ನೇಮಕ ಮಾಡಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಮಂಡಳಿಯ ವಿಶೇಷ ಆಹ್ವಾನಿತರಾಗಿರಬೇಕು ಎಂದು ರಾಜ್ಯಪತ್ರದಲ್ಲಿ ಹೇಳಿದೆ.

ಪ್ರಮುಖ ಸುದ್ದಿ :-   ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

ಮಂಡಳಿಯು ರಾಜ್ಯ ಸರ್ಕಾವು ನೇಮಕ ಮಾಡುವ ಇಬ್ಬರು ಕಾರ್ಯದರ್ಶಿಗಳನ್ನು ಹೊಂದಿರಬೇಕು, ಆ ಪೈಕಿ ಒಬ್ಬರು ಜಂಟಿ ನಿರ್ದೇಶಕರ ದರ್ಜೆಗಿಂತ ಕಡಿಮೆಯಲ್ಲದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಯಾಗಿರಬೇಕು, ಮತ್ತೊಬ್ಬರು ಜಂಟಿ ನಿರ್ದೇಶಕರ ದರ್ಜೆಗೆ ಕಡಿಮೆಯಲ್ಲದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಯಾಗಿರಬೇಕು ಎಂದು ಅದು ಹೇಳಿದೆ.
ಮಂಡಳಿಗಳ ವಿಲೀನವನ್ನು ಹೊಸ ಶಿಕ್ಷಣ ನೀತಿ 2020ರ ಅನುಸಾರವಾಗಿ ಬದಲಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಎಸ್‌ಎಸ್‌ಎಲ್‌ಸಿ ( SSLC Exam ) ಮತ್ತು ಇತರೆ ಸಾರ್ವಜನಿಕ ಪರೀಕ್ಷೆಗಳ ಜೊತೆಗೆ ಪದವಿ ಪೂರ್ವ ಪರೀಕ್ಷೆಯನ್ನು ನಡೆಸಬೇಕು ಎಂದು ಅದು ಹೇಳಿದೆ.

2 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement