ಗಂಗಾವತಿಯ ಹಣ್ಣಿನ ವ್ಯಾಪಾರಿ ಶಿವಮೊಗ್ಗ ಪೊಲೀಸರ ವಶಕ್ಕೆ

ಗಂಗಾವತಿ: ಕೊಪ್ಪಳ ಜಿಲ್ಲೆಯ ಗಂಗಾವತಿಯ ಮೈಬೂಬ್‌ ನಗರದ ನಿವಾಸಿ ಹಾಗೂ ಬಾಳೆಹಣ್ಣಿನ ವ್ಯಾಪಾರಿ ಶಬ್ಬೀರ್‌ ಎಂಬಾತನನ್ನು ಶಿವಮೊಗ್ಗ ಪೊಲೀಸರು ಭಾನುವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ನಿಷೇಧಿತ ಐಎಸ್‌ ಸಂಘಟನೆ ಜೊತೆ ನಂಟು ಹೊಂದಿದ ಆರೋಪದಲ್ಲಿ ಶಬ್ಬೀರ್‌ ಎಂಬಾತನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದು, ಶಿವಮೊಗ್ಗದಲ್ಲಿ ಬಂಧನಕ್ಕೆ ಒಳಗಾಗಿರುವ ಯುವಕರ ಜೊತೆ ಈತ ನಂಟು ಹೊಂದಿದ್ದ ಎಂದು ಹೇಳಲಾಗಿದೆ.

ತುಂಗೆ ದಡದಲ್ಲಿ ಬಾಂಬ್‌ ಸ್ಫೋಟ ಪ್ರಯೋಗ ನಡೆಸಿದ್ದ ಯುವಕರ ಮೊಬೈಲ್‌ನಲ್ಲಿ ಶಬ್ಬೀರ್‌ ಜೊತೆ ಮಾತನಾಡಿದ ಕರೆ ದಾಖಲೆಗಳು ಪತ್ತೆಯಾಗಿವೆ. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಬ್ಬೀರನನ್ನು ವಶಕ್ಕೆ ಪಡೆದ ಪೊಲೀಸರು ರಾತ್ರಿಯೇ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಕೆಲ ದಿನಗಳ ಹಿಂದೆ ಎನ್‌ಐಎ ದಾಳಿ ನಡೆಸಿ ಪಿಎಫ್‌ಐ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷನನ್ನು ಬಂಧಿಸಿ ಕರೆದೊಯ್ದಿತ್ತು. ಈಗ ಶಿವಮೊಗ್ಗ ಪೊಲೀಸರು ಮತ್ತೊಬ್ಬನನ್ನು ಕರೆದೊಯ್ದಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement