ಜೆಡಿಎಸ್ ಪಂಚರತ್ನ ಯಾತ್ರೆಗೆ ಮಹೂರ್ತ ಫಿಕ್ಸ್

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ದಿನವಾದ ನವೆಂಬರ್ 1ರಂದು ಜೆಡಿಎಸ್ ಮಹತ್ವಾಕಾಂಕ್ಷಿ ಕಾರ್ಯಕ್ರಮ ಪಂಚರತ್ನ ಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ಪದಾಧಿಕಾರಿಗಳ ಸಭೆಯ ನಂತರ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಪಂಚರತ್ನ ಯಾತ್ರೆ ನವೆಂಬರ್ 1ರಿಂದ ನಡೆಸಲು ನಿರ್ಧಾರ ಮಾಡಲಾಗಿದೆ. ನಾವು ನಮ್ಮ ಕಾರ್ಯಕ್ರಮ ಜನತೆಗೆ ತಲುಪಬೇಕಾಗಿದೆ. ನಾವು ಅತುರವಿಲ್ಲದೆ ಯಾತ್ರೆ ಮಾಡುತ್ತೇವೆ ಎಂದರು.
ಪಂಚರತ್ನ ರಥಯಾತ್ರೆ ಕಳೆದ ತಿಂಗಳು ಪ್ರಾರಂಭ ಆಗಬೇಕಿತ್ತು. ಆದರೆ ಮಳೆಯಿಂದ ಮುಂದೂಡಲಾಗಿತ್ತು. ಸ್ವತಂತ್ರ ಸರ್ಕಾರ ಬಂದರೆ ಏನು ಮಾಡುತ್ತೇವೆ ಎನ್ನುವುದನ್ನು ಪಂಚರತ್ನ ಯಾತ್ರೆ ಸಮಯದಲ್ಲಿ ಜನರಿಗೆ ಹೇಳುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.

ನೀರಾವರಿ ಯೋಜನೆಗಳ ಜಾರಿಗೆ ಕೊನೆಪಕ್ಷ ಮೂರರಿಂದ ನಾಲ್ಕು ಲಕ್ಷ ಕೋಟಿ ಬೇಕಾಗಿದೆ. ಅದಕ್ಕಾಗಿ ಪಕ್ಷ ಯಾವ ರೀತಿಯ ದೂರದೃಷ್ಟಿ ಹೊಂದಿದೆ ಎಂಬುದನ್ನೂ ಜನತೆಗೆ ತಿಳಿಸುತ್ತೇವೆ ಎಂದರು.
ಸಿಎಂ ಇಬ್ರಾಹಿಂ ರಾಜ್ಯ ಘಟಕದ ಅಧ್ಯಕ್ಷರಾದ ನಂತರ ರಾಜ್ಯ ಕಾರ್ಯಕಾರಣಿಗೆ ಹೊಸ ಸದಸ್ಯರನ್ನು ನೇಮಕ‌ ಮಾಡಲಾಗಿತ್ತು. 27 ಪದಾಧಿಕಾರಿ ಹಾಗೂ 40 ಹೆಚ್ಚುವರಿ ಪದಾಧಿಕಾರಿಗಳ ನೇಮಕ ಆಗಿತ್ತು. ಇಂದು ಅವರೆಲ್ಲರ ಜತೆ ಚರ್ಚೆ ನಡೆಸಲಾಗಿದೆ. ಅವರೆಲ್ಲರಿಗೂ ಮುಂದಿನ ಆರು ತಿಂಗಳ ಕಾಲ ಹೇಗೆ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದ್ದೇವೆ ಎಂದು ತಿಳಿಸಿದರು.
ರಾಜ್ಯ ಕಾರ್ಯಕಾರಣಿ ಸಮಿತಿಗೆ ಆಯ್ಕೆ ಆದ ಮೇಲೆ ಕೆಲವರಿಗೆ ಜಿಲ್ಲಾ ಉಸ್ತುವಾರಿ ಕೊಡುವ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ನೇಮಕ ಮಾಡುವ ಅಧಿಕಾರವನ್ನು ರಾಜ್ಯ ಅಧ್ಯಕ್ಷರಿಗೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಮುಂದಿನ ತಿಂಗಳು ಅಕ್ಟೋಬರ್ 8ರಂದು ಜನತಾ ಮಿತ್ರ ಸಮಾರೋಪ ಸಮಾರಂಭವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈಗಾಗಲೇ ಬೆಂಗಳೂರಿನ ಉದ್ದಗಲಕ್ಕೂ ಜನತಾ ಮಿತ್ರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈಗ ಸಮಾರೋಪ ಸಮಾರಂಭ ಅಯೋಜನೆ ಮಾಡುತ್ತಿದ್ದೇವೆ ಎಂದರು.

ಪ್ರಮುಖ ಸುದ್ದಿ :-   ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಕ್ಕೆ ಹೆದರಲ್ಲ: ಕೆ.ಎಸ್.ಈಶ್ವರಪ್ಪ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement