ನಾಲೆಜ್‌ ಪಾರ್ಕ್ ಸ್ಥಾಪನೆಯತ್ತ ನಮ್ಮ ಚಿಂತನೆ ಇರಲಿ: ಧಾರವಾಡದ ಐಐಐಟಿ ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು

ಧಾರವಾಡ: ಡಿಜಿಟಲ್ ತಂತ್ರಜ್ಞಾನದಲ್ಲಿ ಭಾರತವು ಮುಂಚೂಣಿಯಲ್ಲಿದ್ದು, ಇನ್ನೂ ಗುಣಮಟ್ಟದ ತಂತ್ರಜ್ಞರನ್ನು ತಯಾರು ಮಾಡಿದರೆ ಇನ್ನೂ ಎತ್ತರಕ್ಕೇರಲು ಸಾಧ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಪ್ರಾಯಪಟ್ಟರು.
ಧಾರವಾಡದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಹಾಗೂ ಅದರ ನೂತನ ಕ್ಯಾಂಪಸ್‌ ಅನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ, ನ್ಯಾನೊ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಜೈವಿಕ ತಂತ್ರಜ್ಞಾನ, ನರ ವಿಜ್ಞಾನ ಮೊದಲಾದ ಕ್ಷೇತ್ರಗಳಲ್ಲಿ ತಂತ್ರಜ್ಞಾನದ ಅಭಿವೃದ್ಧಿಯಿಂದಾಗಿ ಬಡವರಿಗೆ ಅನುಕೂಲ ಹೆಚ್ಚಾಗಲಿದೆ. ನೂತನ ಶಿಕ್ಷಣ ನೀತಿಯಲ್ಲೂ ತಂತ್ರಜ್ಞಾನದ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಇಂಥ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸಂಶೋಧನೆಗಳಿಗೆ ಮಹತ್ವ ನೀಡಬೇಕು ಎಂದು ರಾಷ್ಟ್ರಪತಿ ಮುರ್ಮು ಹೇಳಿದರು.

‘ಸಿಲಿಕಾನ್ ಸಿಟಿ ಬೆಂಗಳೂರು ಸಮೀಪದಲ್ಲೇ ಇರುವ ಧಾರವಾಡದಲ್ಲೂ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿವೆ. ಸಾಕಷ್ಟು ಬಹುರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಕಂಪನಿಗಳೂ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿವೆ. ಇವೆಲ್ಲವುಗಳನ್ನೂ ಒಗ್ಗೂಡಿಸಿ ಜ್ಞಾನ ವೃದ್ಧಿಸುವ ನಾಲೆಡ್ಜ್ ಪಾರ್ಕ್ ಅನ್ನು ಸ್ಥಾಪಿಸುವತ್ತ ಚಿಂತನೆ ನಡೆಸಬೇಕಿದೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಲಹೆ ನೀಡಿದರು.
ತಾಂತ್ರಿಕ ಶಿಕ್ಷಣದಲ್ಲಿ ದೇಶವು ಅಗ್ರಸ್ಥಾನದಲ್ಲಿದೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆಗಳು ಹಾಗೂ ಅನ್ವೇಷಣೆಗಳು ನಡೆಯಬೇಕಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರ ಒತ್ತು ನೀಡಿದೆ ಎಂದು ಅವರು ಹೇಳಿದರು.
ಐಐಐಟಿ ಅಧ್ಯಕ್ಷರಾಗಿ ಸುಧಾಮೂರ್ತಿ ಅವರು ಇರುವುದರಿಂದ ಇಲ್ಲಿ ವಿದ್ಯಾರ್ಥಿನಿಯರ ಕಲಿಕೆಗೆ ಹೆಚ್ಚು ಒತ್ತು ಸಿಗುವ ವಿಶ್ವಾಸವಿದೆ’ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ‘ ತಂತ್ರಜ್ಞಾನದ ಅಭಿವೃದ್ಧಿ ಮನುಕುಲದ ಉದ್ಧಾರಕ್ಕೆ ಮೀಸಲಾಗಿರಬೇಕು. ಐಐಐಟಿ ಧಾರವಾಡದಲ್ಲಿ ಎರಡು ಕನಿಷ್ಠ ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ಸಿಗುವಂತಾಗಬೇಕು ಎಂದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರ ಕಾಲದಲ್ಲಿ ಅಡಿಗಲ್ಲು ಹಾಕಿದ ಎಲ್ಲಾ ಸಂಸ್ಥೆಗಳ ಉದ್ಘಾಟನೆ ಆ ಅವಧಿಯಲ್ಲೇ ಉದ್ಘಾಟನೆಯಾಗುತ್ತಿವೆ. 2019ರಲ್ಲಿ ಐಐಐಟಿ ಹಾಗೂ ಐಐಟಿಗೆ ಮೋದಿ ಅಡಿಗಲ್ಲು ಹಾಕಿದ್ದರು. ಇದೇ ಡಿಸೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರೇ ಐಐಟಿ ಧಾರವಾಡದ ನೂತನ ಕ್ಯಾಂಪಸ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

ರಾಜ್ಯಪಾಲ ಥಾವರಚಂದ ಗೆಹ್ಲೋತ್ ಮಾತನಾಡಿದರು. ಐಐಐಟಿ ಧಾರವಾಡ ಅಧ್ಯಕ್ಷೆ ಸುಧಾಮೂರ್ತಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೌದಿ, ಇಳಕಲ್ ಸೀರೆ ಹಾಗೂ ‘ತ್ರೀ ಥೌಸಂಡ್ ಸ್ಟಿಚಸ್‌’ ಎಂಬ ಇಂಗ್ಲಿಷ್‌ ಹಾಗೂ ಹಿಂದಿ ಪುಸ್ತಕ ನೀಡಿದರು.
ಸಂಸ್ಥೆಯ ಅಧ್ಯಕ್ಷೆ ಹಾಗೂ ಇನ್ಪೊಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ರಾಷ್ಟಪತಿ ಮುರ್ಮು ಅವರನ್ನು ಸಂಸ್ಥೆಯ ಪರವಾಗಿ ಸ್ವಾಗತಿಸಿದರು. ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಮೊದಲಾದವರು ಇದ್ದರು. ಸಭಾಂಗಣದಲ್ಲಿ ಸುಮಾರು 700 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳು, ಆಹ್ವಾನಿತರು, ಭಾರತೀಯ ತಾಂತ್ರಜ್ಞಾನ ಸಂಸ್ಥೆ (ಐಐಟಿ) ಅಧಿಕಾರಿಗಳು ಮೊದಲಾದವರಿದ್ದರು.

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement