ಹುಬ್ಬಳ್ಳಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪೌರ ಸನ್ಮಾನ

ಹುಬ್ಬಳ್ಳಿ: ಪೌರ ಸನ್ಮಾನ ಮಾಡಿ ಕೇವಲ ಒರಿಸ್ಸಾದ ಬಡ ಕುಟುಂಬದ ಹೆಣ್ಣುಮಗಳನ್ನು ಸನ್ಮಾನಿಸಿಲ್ಲ. ಇಡೀ ಭಾರತದ ಎಲ್ಲಾ ಹೆಣ್ಣುಮಕ್ಕಳನ್ನು ಗೌರವಿಸಿದ್ದೀರಿ. ‘ನಿಮ್ಮೆಲ್ಲರ ಪ್ರೀತಿ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಸೋಮವಾರ ಆಯೋಜಿಸಲಾಗಿದ್ದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಧಾರವಾಡ ಜಿಲ್ಲೆ ವಿದ್ಯಾಕಾಶಿ ಎಂದು ಕರೆಸಿಕೊಳ್ಳುತ್ತಿದೆ. ದ.ರಾ. ಬೇಂದ್ರೆ, ವಿ.ಕೃ.ಗೋಕಾಕ್ ಅಂತಹ ಮಹಾನ್ ಸಾಹಿತಿಗಳು ಇಲ್ಲಿ ಆಗಿ ಹೋಗಿರುವುದೇ ಇದಕ್ಕೆ ಸಾಕ್ಷಿ. ಇಂತಹ ಉತ್ತಮ ನಾಯಕರನ್ನು ನೀವು ನಾಡಿಗೆ ಕೊಟ್ಟಿದ್ದೀರಿ ಎಂದರು.

ಇಡೀ ದೇಶ ಬಸವೇಶ್ವರರ ಸಾಮಾಜಿಕ ಶಿಕ್ಷಣ, ಸಿದ್ಧಾರೂಢರ ಆಧ್ಯಾತ್ಮಿಕ ಸಂದೇಶದಿಂದ ಪ್ರೇರಿತವಾಗಿದೆ. ಕಿತ್ತೂರು ಚೆನ್ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದು ರಾಜ್ಯದ ಸಾಧಕರನ್ನು ಸ್ಮರಿಸಿದರು.
ಭಾರತದ ಹೆಮ್ಮೆಯ ಅವಳಿನಗರ ಹುಬ್ಬಳ್ಳಿ- ಧಾರವಾಡಎಲ್ಲಾ ಜಾತಿ ಧರ್ಮದ ಜನರು ಇಲ್ಲಿ ಸೌಹಾರ್ದತೆಯಿಂದ ಬದುಕುತ್ತಿದ್ದೀರಿ. ದೇಶದ ಎರಡನೆ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಆಗಮಿಸಿದ್ದರು ಎಂದು ನೆನಪಿಸಿಕೊಂಡರು.
ಹುಬ್ಬಳ್ಳಿ ಧಾರವಾಡ, ಕಲಘಟಗಿ, ಅಳ್ನಾವರ, ಉತ್ತರ ಕನ್ನಡ ಸೇರಿದಂತೆ ಉತ್ತರ ಕರ್ನಾಟಕ ಭಾಗಗಳಿಂದ ಸುಮಾರು 50 ಬುಡಕಟ್ಟು ಜನಾಂಗದವರಿಗೆ ವಿಶೇಷ ಆಮಂತ್ರಣ ನೀಡಲಾಗಿತ್ತು. ವಿವಿಧ ಭಾಗಗಳಿಂದ ಆಗಮಿಸಿದ ಬುಡಕಟ್ಟು ಜನಾಂಗದವರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement