2024ರ ಲೋಕಸಭಾ ಚುನಾವಣೆ, ವರ್ಷದಲ್ಲಿ ಸಾಲುಸಾಲು ಚುನಾವಣೆಗಳು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಗೆ ಅವಧಿ ವಿಸ್ತರಣೆ ಸಾಧ್ಯತೆ

ನವದೆಹಲಿ: ಮುಂದಿನ ಸಾರ್ವತ್ರಿಕ ಚುನಾವಣೆಗೆ ಎರಡು ವರ್ಷಕ್ಕಿಂತ ಕಡಿಮೆ ಸಮಯವಿದ್ದು, ಅದಕ್ಕೂ ಮುನ್ನ ರಾಜ್ಯ ಚುನಾವಣೆಗಳ ಸರಮಾಲೆಯಿರುವಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾಕದ ಅವಧಿ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ವಿಸ್ತರಣೆಯು ಏಪ್ರಿಲ್-ಮೇ 2024ರ ಲೋಕಸಭೆ ಚುನಾವಣೆಯ ಕೊನೆಯವರೆಗೂ ಇರುತ್ತದೆ ಎಂದು ಹೇಳಲಾಗಿದೆ. 2020ರಲ್ಲಿ ಅಮಿತ್ ಶಾ ಅವರಿಂದ ಬಿಜೆಪಿ ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವ ಜೆ.ಪಿ. ನಡ್ಡಾ ಅವರ ಮೂರು ವರ್ಷಗಳ ಅವಧಿಯು ಜನವರಿ 20, 2023 ರಂದು ಕೊನೆಗೊಳ್ಳಲಿದೆ.

ಬಿಜೆಪಿ ನಾಯಕರ ಪ್ರಕಾರ, ನಡ್ಡಾ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿಶ್ವಾಸ ಹೊಂದಿದ್ದಾರೆ ಮತ್ತು ಅವರ ಉತ್ತಮ ಕಾರ್ಯಕ್ಷಮತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ಮಾಡಲಾಗಿದೆ. ನಡ್ಡಾ ಅವರನ್ನು ಜುಲೈ 2019 ರಲ್ಲಿ ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಯಿತು ಮತ್ತು 20 ಜನವರಿ 2020 ರಂದು ಪೂರ್ಣ ಸಮಯದ ಅಧ್ಯಕ್ಷರಾಗಿ ಅವರು ಅಧಿಕಾರ ವಹಿಸಿಕೊಂಡರು ಹಾಗೂ ಸರ್ವಾನುಮತದಿಂದ ಅವರನ್ನು ಆಯ್ಕೆ ಮಾಡಲಾಯಿತು.
ಬಿಜೆಪಿ ಸಂವಿಧಾನದ ಪ್ರಕಾರ, ಪಕ್ಷದ ಅಧ್ಯಕ್ಷರು ತಲಾ ಮೂರು ವರ್ಷಗಳಂತೆ ಸತತ ಎರಡು ಅವಧಿಯನ್ನು ಪಡೆಯಬಹುದು ಎಂದು ಮೂಲಗಳು ತಿಳಿಸಿವೆ. ಕನಿಷ್ಠ ಶೇ.50ರಷ್ಟು ರಾಜ್ಯ ಘಟಕಗಳಲ್ಲಿ ಸಂಘಟನಾ ಚುನಾವಣೆ ನಡೆದ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭವಾಗಬಹುದು ಎಂಬ ನಿಬಂಧನೆಯೂ ಇದೆ.
ಆಂತರಿಕ ಚುನಾವಣೆಯ ಪ್ರಕ್ರಿಯೆ ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಪ್ರಕ್ರಿಯೆಯು ಆಗಸ್ಟ್‌ನಲ್ಲಿ ಪ್ರಾರಂಭವಾಗಬೇಕಿತ್ತು ಆದರೆ ಪಕ್ಷದ ನಾಯಕರು ರಾಜ್ಯ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ.
ವರ್ಷದೊಳಗೆ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕ, ತ್ರಿಪುರಾ, ಮೇಘಾಲಯ, ಮಿಜೋರಾಂ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಇದರೊಂದಿಗೆ ಲೋಕಸಭೆ ಚುನಾವಣೆಗೂ ಪಕ್ಷ ಸಿದ್ಧತೆ ನಡೆಸಿದೆ.
ಪಕ್ಷದ ಮಾಜಿ ಮುಖ್ಯಸ್ಥ ಅಮಿತ್ ಶಾ ಅವರನ್ನೂ 2019 ರಲ್ಲಿ ಲೋಕಸಭೆ ಚುನಾವಣೆಯವರೆಗೆ ವಿಸ್ತರಿಸಲಾಗಿತ್ತು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement