250 ಪಶು ವೈದ್ಯಕೀಯ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (Karnataka Examination Authority) ಕಿರಿಯ ಪಶು ವೈದ್ಯಕೀಯ ಪರೀಕ್ಷಕರ (ಪಶು ವೈದ್ಯಕೀಯ ಸಹಾಯಕ) ಒಟ್ಟು 250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಪಶು ಆರೋಗ್ಯದಲ್ಲಿ ಡಿಪ್ಲೊಮಾ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 4 ಆಗಿದೆ.
ಸಂಸ್ಥೆ- ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ (AHVS)
ಹುದ್ದೆ-ಪಶು ವೈದ್ಯಕೀಯ ಸಹಾಯಕ
ಹುದ್ದೆಗಳ ಸಂಖ್ಯೆ-250
ಮಾಸಿಕ ವೇತನ-21400-42000 ರೂ.ಗಳು
ಶೈಕ್ಷಣಿಕ ಅರ್ಹತೆ: ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿವಿಎಸ್ಸಿ, ಬಿವಿಎಸ್ಸಿ (ಎಎಚ್​​), ಬಿಎಸ್ಸಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು.
ವಯೋಮಿತಿ ಸಡಿಲಿಕೆ: ಪ.ಜಾ, ಪ. ಪಂ ಮತ್ತು ಪ್ರವರ್ಗ 1ಎ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ ಇತರ ಹಿಂದುಳಿದ ವರ್ಗಗಳಿಗೆ 3 ವರ್ಷಗಳು
ಅರ್ಜಿ ಶುಲ್ಕ: ಪ.ಜಾ, ಪ.ಪಂ, ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: 500 ರೂ. ಮತ್ತು ಸಾಮಾನ್ಯ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 750 ರೂ.

ಪ್ರಮುಖ ಸುದ್ದಿ :-   ಗದಗ: ನಾಲ್ವರು ಅಮಾಯಕರ ಕೊಲೆ ಪ್ರಕರಣ ಭೇದಿಸಿದ ಪೊಲೀಸರು, ತಂದೆ-ತಾಯಿ ಕೊಲೆಗೆ ಮಗನೇ ಸುಪಾರಿ ಕೊಟ್ಟಿದ್ದ...! 8 ಮಂದಿ ಬಂಧನ

ಆಯ್ಕೆ ಪ್ರಕ್ರಿಯೆ: ಕನ್ನಡ ಕಡ್ಡಾಯ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ: 05 ಅಕ್ಟೋಬರ್​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನ: 04 ನವೆಂಬರ್ 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನ: 06 ನವೆಂಬರ್​​ 2022
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ-Revised Notification -JUNIOR VETERINARY EXAMINER _Veternery Assistant_kannada
ಅಧಿಕೃತ ವೆಬ್‌ಸೈಟ್:http://ahvs.kar.nic.in

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement