ಅಸ್ವಸ್ಥತೆ ನಂತರ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಆಸ್ಪತ್ರೆಗೆ ದಾಖಲು: ವರದಿ

ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಅನಾರೋಗ್ಯದ ಬಗ್ಗೆ ದೂರು ನೀಡಿದ ನಂತರ ನಿನ್ನೆ ರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ವರದಿಯಾಗಿದೆ.
ನಟಿ ದೀಪಿಕಾ ನಂತರ ಹಲವಾರು ಪರೀಕ್ಷೆಗಳಿಗೆ ಒಳಗಾದರು. ಈಗ ಅವರ ಆರೋಗ್ಯ ಸ್ಥಿರವಾಗಿದೆ ಹಾಗೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಆದಾಗ್ಯೂ, ಅವರ ತಂಡ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಅಥವಾ ಕುಟುಂಬಸ್ಥರಾಗಲಿ ಮಾಧ್ಯಮಗಳಿಗೆ ಮಾಹಿತಿ ನೀಡಿಲ್ಲ ಹಾಗೂ ಈ ಬೆಳವಣಿಗೆಯನ್ನು ಇನ್ನೂ ಖಚಿತಪಡಿಸಿಲ್ಲ.

ನಟಿ ಅಸ್ವಸ್ಥ ಪರಿಸ್ಥಿತಿ ಎದುರಿಸಿದರು ಮತ್ತು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪಿಂಕ್ವಿಲ್ಲಾ ವರದಿ ಮಾಡಿದೆ. ನಟಿ ಈಗ ಉತ್ತಮ ಸ್ಥಿತಿಯಲ್ಲಿದ್ದಾರೆ ಎಂದು ಹೇಳಲಾಗಿದೆ.
ಒಂದೆರಡು ತಿಂಗಳ ಹಿಂದೆ, ನಟಿ ಹೈದರಾಬಾದ್‌ನಲ್ಲಿ ತನ್ನ ಮುಂಬರುವ ಚಿತ್ರ ಪ್ರಾಜೆಕ್ಟ್ ಕೆ ಚಿತ್ರೀಕರಣದಲ್ಲಿದ್ದಾಗ ಇದೇ ರೀತಿಯ ವರದಿಗಳು ಸುತ್ತುತ್ತಿದ್ದವು. ಚಿತ್ರದ ಸೆಟ್‌ನಲ್ಲಿ ಅಸ್ವಸ್ಥತೆ ಬಗ್ಗೆ ದೂರು ನೀಡಿದ ನಂತರ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು ಎಂದು ವರದಿಗಳು ತಿಳಿಸಿದ್ದವು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement