ಪಿಎಫ್‌ಐ ಮೇಲೆ ಏಕಕಾಲಕ್ಕೆ ದಾಳಿ, 80 ಮಂದಿ ವಶಕ್ಕೆ : ಎಡಿಜಿಪಿ ಅಲೋಕಕುಮಾರ

ಬೆಂಗಳೂರು: ಇಂದು, ಮಂಗಳವಾರ ಮುಂಜಾನೆ 3 ಗಂಟೆಯಿಂದಲೇ ಪೊಲೀಸರು, ರಾಜ್ಯಾದ್ಯಂತ ಪಿಎಫ್‍ಐ ಪದಾಧಿಕಾರಿಗಳು ಮತ್ತು ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕಕುಮಾರ ತಿಳಿಸಿದ್ದಾರೆ.
ಈವರೆಗೆ 80 ಜನರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ವಿವಿಧ ಜಿಲ್ಲೆಗಳಲ್ಲಿ ಎಸ್ಪಿಗಳು, ನಗರಗಳಲ್ಲಿ ಆಯುಕ್ತರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಎನ್‍ಐಎ ಮತ್ತು ಇತರ ಕೇಂದ್ರೀಯ ತನಿಖಾ ಏಜೆನ್ಸಿಗಳಿಂದ ಮಾಹಿತಿಗಳು ದೊರೆತ ಾಧಾರದ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದರು.
ಎಲ್ಲೆಡೆ ಏಕಕಾಲಕ್ಕೆ ಈ ದಾಳಿ ನಡೆದಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ, ಕೋಮು ಸೌಹಾರ್ದಕ್ಕೆ ಹಾನಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ದಾಳಿ ನಡೆಸಲಾಗಿದೆ. ವಶಕ್ಕೆ ತೆಗೆದುಕೊಂಡ ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಎಂದು ಅವರು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement