ಪ್ರತಿಭಟನೆ, ಉದ್ವಿಗ್ನತೆ ಸೃಷ್ಟಿ, ಮುನ್ನೆಚ್ಚರಿಕೆ ಕ್ರಮವಾಗಿ ಪಿಎಫ್‌ಐ ಮುಖಂಡರು ವಶಕ್ಕೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಎನ್‌ಐಎ ದಾಳಿಯ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿ ಉದ್ವಿಗ್ನ ವಾತಾವರಣ ಉಂಟು ಮಾಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಹಲವು ಕಡೆಗಳಲ್ಲಿ ಪೊಲೀಸರು ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಮುನ್ನೆಚ್ಚರಿಕೆಯ ಕ್ರಮವಾಗಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇತ್ತೀಚೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಕೆಲವರ ನಿವಾಸಗಳ ಮೇಲೆ ದಾಳಿ ನಡೆಸಿದ ವೇಳೆ ಪಿಎಫ್‌ಐ ಸಂಘಟನೆಗೆ ಸೇರಿದ ಕೆಲವು ಕಾರ್ಯಕರ್ತರು ಬೀದಿಗೆ ಬಂದು ಪ್ರತಿಭಟಿಸಿ ಉದ್ವಿಗ್ನತೆ ಉಂಟು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮದ ಭಾಗವಾಗಿ ರಾಜ್ಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದರು.

ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಪೊಲೀಸರು ಶಾಕ್ ನೀಡಿದ್ದು, ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದೆ. ಸಮಾಜದಲ್ಲಿ ಶಾಂತಿ ಕದಡುವ ಆರೋಪ ಹಾಗೂ ದುಷ್ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಹಿನ್ನೆಲೆಯಲ್ಲಿ ಹಲವರನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಬಾಗಲಕೋಟೆ, ಬೀದರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಹಲವು ಮುಖಂಡರು ತಲೆಮರೆಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ದಾಳಿಗಳು ನಡೆಯಬಹುದಾಗಿದೆ ಎಂದು ಹೇಳಲಾಗುತ್ತಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement