ಬೆಳ್ಳಂಬೆಳಿಗ್ಗೆ ರಾಜ್ಯದ ಹಲವೆಡೆ ಪಿಎಫ್ಐ ಸಂಘಟನೆ ಮೇಲೆ ದಾಳಿ: ಹಲವು ಮುಖಂಡರು, ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ಬೆಂಗಳೂರು: ಕಳೆದ ವಾರ ರಾಷ್ಟ್ರೀಯ ತನಿಖಾ ದಳ (NIA) ರಾಜ್ಯದ ಹಲವು ಭಾಗಗಳಲ್ಲಿ ದಾಳಿ ನಡೆಸಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ನಾಯಕರನ್ನು ಬಂಧಿಸಿದ ಬೆನ್ನಿಗೇ ಇಂದು ಮಂಗಳವಾರ ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಪೊಲೀಸರು ಪಿಎಫ್‌ಐ  ಶಾಕ್‌ ನೀಡಿದ್ದಾರೆ. ಎನ್​ಐಎ ಮಾಹಿತಿ ಆಧರಿಸಿ, ರಾಜ್ಯಾದ್ಯಂತ ದಾಳಿ ನಡೆಸಿ ರಾಜ್ಯದ ವಿವಿಧೆಡೆ ಪಾಫುಲರ್​​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ)ದ ನಾಯಕರು ಹಾಗೂ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿ 40 ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಅವರನ್ನು ಸ್ಥಳೀಯ ತಹಸೀಲ್ದಾರ್ ಮುಂದೆ ಹಾಜರುಪಡಿಸಲಾಗುತ್ತದೆ ಮತ್ತು ನ್ಯಾಯಾಂಗ ಬಂಧನವನ್ನು ಕೋರಲಾಗುವುದು ಮತ್ತು ಜೈಲಿಗೆ ಕಳುಹಿಸಲಾಗುತ್ತದೆ. ಈ ಪಿಎಫ್‌ಐ ಸದಸ್ಯರು ಎನ್‌ಐಎ ಸಿಬ್ಬಂದಿಯನ್ನು ತಡೆದು ಮೊದಲು ಪ್ರತಿಭಟನೆ ನಡೆಸಿದ್ದರು ಅಥವಾ ಸ್ಥಳೀಯವಾಗಿ ತೊಂದರೆ ಸೃಷ್ಟಿಸಿದ್ದರು ಎಂದು ಹೇಳಲಾಘIDE>

ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಬಾಗಲಕೋಟೆ, ಬೀದರ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮೀಣ, ರಾಮನಗರ, ಕೋಲಾರ, ಮೈಸೂರು, ಚಾಮರಾಜನಗರ ಮೊದಲಾದೆಡೆ ದಾಳಿ ನಡೆದಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಮತ್ತು ಆಯಾ ಜಿಲ್ಲೆಗಳ ಎಸ್‌ಪಿ ಹಾಗೂ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ವಶಕ್ಕೆ ಪಡೆದವರು ಪಿಎಫ್ಐ ಪ್ರತಿಭಟನೆ ಹಾಗೂ ಪಿಎಫ್ಐಗೆ ಸೇರಿದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದರು. ಇದರ ಜೊತೆ ಇವರು ಭಾರೀ ಫಂಡಿಂಗ್ ಮಾಡುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿಯಲ್ಲಿಯೂ ದಾಳಿ ಮಾಡಲಾಗಿದೆ. ದೊಡ್ಡಬಳ್ಳಾಪುರದ ಇಸ್ಲಾಂಪುರದಲ್ಲಿ ಮೂವರು, ದೇವನಹಳ್ಳಿಯ ವಿಜಯಪುರದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ರಾಯಚೂರು ನಗರದಲ್ಲಿ ದಾಳಿ ನಡೆಸಿದ ಪೊಲೀಸರು, ಪಿಎಫ್ಐ ಮಾಜಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ರಾಯಚೂರು ಉಪ ವಿಭಾಗದ ಡಿಎಸ್ಪಿ ವೆಂಕಟೇಶ ನೇತೃತ್ವದ ತಂಡ ಬೆಳಗಿನ ಜಾವ ಐದು ಗಂಟೆಗೆ ವಶಕ್ಕೆ ಪಡೆದು ಕರೆದೊಯ್ದಿದ್ದು, ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ರಾಮನಗರದಲ್ಲೂ ಪಿಎಫ್ಐ ಕಾರ್ಯಕರ್ತರ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ತಡರಾತ್ರಿ ಏಕಾಏಕಿ ಕಾರ್ಯಾಚರಣೆ ಮಾಡಿರುವ ರಾಮನಗರ ಪೊಲೀಸರು, ಐಜೂರು ಠಾಣಾ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಮನೆ ಮೇಲೆ ದಾಳಿ ಮಾಡಿದ್ದು, 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಚಾಮರಾಜನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಪಿಎಫ್ಐ ಮುಖಂಡರನ್ನು ಬಂಧಿಸಿದ್ದಾರೆ.
ಬೀದರಿನಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆ ಮುಖಂಡರ ಮನೆ ಮೇಲೆ ಮಂಗಳವಾರ ಬೆಳಗಿನ ಜಾವ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷ ಹಾಗೂ ಎಸ್ ಡಿಪಿಐ ಸಂಘಟನೆಯ ಕಾರ್ಯದರ್ಶಿ ಅವರನ್ನು ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮಂಗಳವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಎಪೊಲೀಸರು ಏಕಕಾಲಕ್ಕೆ ಮನೆಗಳ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಕಲಬುರಗಿಯಲ್ಲೂ ಪಿಎಫ್ಐ, ಎಸ್‌ಡಿಪಿಐ ಸಂಘಟನೆಯ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ತೀವ್ರಗೊಳಿಸಿದ್ದಾರೆ ಎಂದು ಹೇಳಲಾಗಿದೆ.
ಮಂಗಳೂರಿನಲ್ಲೂ ದಾಳಿ ನಡೆಸಿರುವ ಖಾಕಿ ತಂಡ ಎಂಟು ಮಂದಿ ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಬಾಗಲಕೋಟೆ  7, ಬೀದರ್- 2, ವಿಜಯಪುರ-1, ಕಲಬುರಗಿ-2, ಚಿತ್ರದುರ್ಗ-1, ರಾಯಚೂರು-1, ಚಾಮರಾಜನಗರ-2, ಉಡುಪಿ-4, ದಕ್ಷಿಣ ಕನ್ನಡ-8, ಶಿವಮೊಗ್ಗ-5, ಕೋಲಾರ- 6, ಯಾದಗಿರಿ-2, ತುಮಕೂರು-1, ಕೊಪ್ಪಳ-2, ಮಂಡ್ಯ-5, ಬೆಳಗಾವಿ-7, ರಾಮನಗರ-9, ಮೈಸೂರಿನಲ್ಲಿ ಮೂವರು ಸೇರಿದಂತೆ 70ಕ್ಕೂ ಅಧಿಕ ಜನರನ್ನು ವಶಕ್ಕೆ ಪಡೆಯಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement