15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ; ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ-ಸಚಿವ ನಾಗೇಶ ಮಾಹಿತಿ

ಬೆಂಗಳೂರು: ರಾಜ್ಯದ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಪಟ್ಟಿಯನ್ನು ಇಂದು  (ಸೆಪ್ಟೆಂಬರ್‌ 27) ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ ಮಾಹಿತಿ ನೀಡಿದ್ದಾರೆ.

ಶಿಕ್ಷಕರ ನೇಮಕಾತಿಗೆ ಆಯ್ಕೆ ಪಟ್ಟಿ ಸಿದ್ಧಪಡಿಸಿದ್ದು, ಶಿಕ್ಷಣ ಸಚಿವರೇ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದು, 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಬೆಂಗಳೂರು ವಿಭಾಗದ ದಾಖಲಾತಿ ಪರಿಶೀಲನೆ ಪಟ್ಟಿಯನ್ನು ಇಂದು, ಮಂಗಳವಾರ ಪ್ರಕಟಿಸಲಾಗುತ್ತದೆ. ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗದ ಪಟ್ಟಿಯನ್ನು ಕ್ರಮವಾಗಿ ಬುಧವಾರ ಮತ್ತು ಗುರುವಾರ ಸಂಜೆ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈ ವೆಬ್​ ಸೈಟ್ ನಲ್ಲಿ ಫಲಿತಾಂಶ
ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗದ ಪಟ್ಟಿಯನ್ನು ಕ್ರಮವಾಗಿ ಬುಧವಾರ ಮತ್ತು ಗುರುವಾರ ಸಂಜೆ ನಂತರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಪರಿಶೀಲನಾ ಪಟ್ಟಿ ನೋಡಲು ಈ ವೆಬ್​ ಸೈಟ್​ http://schooleducation.kar.nic.in/index.html  ನೋಡಬಹುದು ಎಂದು ಸಚಿವರಿ ತಿಳಿಸಿದ್ದಾರೆ.
ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್‌ /ಏಪ್ರಿಲ್‌ ತಿಂಗಳಲ್ಲಿ ಅರ್ಜಿ ಸ್ವೀಕಾರ ಮಾಡಿತ್ತು. ಹಾಗೂ ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು.

ಪ್ರಮುಖ ಸುದ್ದಿ :-   ವೀಡಿಯೊ...| ಬೈಕ್​ಗೆ ಡಿಕ್ಕಿ ಹೊಡೆದ ನಂತ್ರ ದೂರ ಎಳೆದೊಯ್ದ ಲಾರಿ..: ಟ್ರಕ್‌ ಹಿಡಿದುಕೊಂಡು ನೇತಾಡುತ್ತಿದ್ದ ಸವಾರ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement