ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಬೆಂಬಲಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಸರ್ವಾನುಮತದ ನಿರ್ಣಯ ಅಂಗೀಕಾರ

posted in: ರಾಜ್ಯ | 0

ಹುಬ್ಬಳ್ಳಿ: ಬಹುನಿರೀಕ್ಷಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣಕ್ಕೆ ಸಂಪೂರ್ಣವಾಗಿ ಬೆಂಬಲಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ತನ್ನ ೯೩ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಅಂಗೀಕಾರ ಮಾಡಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು, ಈ ಯೋಜನೆ ಜಾರಿಯಾಗುವುದರಿಂದ ಉತ್ತರ ಕರ್ನಾಟಕ ಸಂಪೂರ್ಣ ಅಭಿವೃದ್ಧಿಯಾಗಲಿದೆ. ಅಷ್ಟೇ ಅಲ್ಲದೆ ಉದ್ಯಮಿಗಳ ಅಭಿವೃದ್ಧಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದೆ.
ಕಳೆದ ಅನೇಕ ವರ್ಷಗಳಿಂದ ಹುಬ್ಬಳ್ಳಿ -ಅಂಕೋಲಾ ರೈಲು ಮಾರ್ಗಕ್ಕಾಗಿ ಈ ಭಾಗದ ೧೬ ಜಿಲ್ಲೆಗಳ ಸುಮಾರು ೩.೪೦ ಕೋಟಿ ಜನ ನಿರೀಕ್ಷೆಯಲ್ಲಿದ್ದಾರೆ. ಈ ಯೋಜನೆ ಕೇವಲ ಕಬ್ಬಿಣದ ಅದಿರು ಸಾಗಾಣಿಕೆಗೆ ಇರದೇ ಉತ್ತರ ಮತ್ತು ಮಧ್ಯ ಕರ್ನಾಟದ ಶೇ. ೫೨ ಜನರಿಗೆ ಕರ್ನಾಟಕದ ಕರಾವಳಿ ಭಾಗ ಹೊಂದಿರುವ ಉತ್ತರ ಕನ್ನಡ ಜಿಲ್ಲೆಗೆ ಏಕ ಮಾತ್ರ ಸಮೂಹ ಸಾರಿಗೆ ಯೋಜನೆಯಾಗಿದೆ. ಈಗಾಗಲೇ ಕೊಂಕಣ ರೈಲ್ವೆ ಅಸ್ತಿತ್ವದಲ್ಲಿದ್ದು, ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಯಿಂದ ದೇಶದ ಬೇರೆ ಬೇರೆ ಭಾಗಗಳಿಗೆ ಸಂಪರ್ಕ ಕ್ಲಪಿಸಲು ಅನುಕೂಲವಾಗುತ್ತದೆ ಎಂದು ಹೇಳಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಹಿಂದುತ್ವದ ಬಗ್ಗೆ ಪೋಸ್ಟ್; ನಟ ಚೇತನ್ ಬಂಧನ

ರಾಷ್ಟ್ರಕವಿ ದಿ.ನಾರಾಯಣರಾವ ಹುಯಿಲಗೋಳ ಅವರು ಕಂಡ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಕನಸು ನನಸಾಗಬೇಕಾದರೆ ಕರ್ನಾಟಕದ ಸಮಗ್ರ ಗಮನಾರ್ಹ ಅಭಿವೃದ್ಧಿಗೆ, ಸಮೂಹ ಸಾರಿಗೆ, ಸರಕು, ಸಲಕರಣೆ, ಉತ್ಪನ್ನಗಳ ಸಾಗಾಣಿಕೆಗೆ ಈ ಯೋಜನೆ ಅತ್ಯವಶ್ಯವಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ಥಾಪಿಸಲ್ಪಟ್ಟ ಸಿಬರ್ಡ ನೌಕಾ ನೆಲೆಗೆ, ಕಾರವಾರ-ಬೇಲಿಕೇರಿ ಬಂದರು, ಕದ್ರಾ ಬಂದರುಗಳ ಅಭಿವೃದ್ಧಿ, ಕಲ್ಲಿದ್ದಲು, ತೈಲ, ಉಕ್ಕು, ಕೃಷಿ ಉತ್ಪನ್ನಗಳು, ಯಂತ್ರ ಸಾಮಗ್ರಿಗಳು, ಕಚ್ಚಾ ವಸ್ತುಗಳ ಆಯಾತ-ನಿರ್ಯಾತಕ್ಕೆ, ಉತ್ತರ ಕರ್ನಾಟಕದಲ್ಲಿ ನಿಯೋಜಿತ ಅನೇಕ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ, ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಪ್ರಾರಂಭಗೊಳ್ಳುತ್ತಿರುವ ಕೈಗಾರಿಕಾ ಕಾರಿಡಾರಗಳಿಗೆ ಈ ಯೋಜನೆ ಸಹಕಾರಿಯಾಗಲಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ತನ್ನ ನಿರ್ಣಯದಲ್ಲಿ ಹೇಳಿದೆ.

ಹುಬ್ಬಳ್ಳಿ -ಅಂಕೋಲಾ ರೈಲು ಮಾರ್ಗ ರಸ್ತೆ ಅಭಿವೃದ್ಧಿ ಮಾಡುವುದಕ್ಕಿಂತ ಹೆಚ್ಚು ಪರಿಸರ ಸ್ನೇಹಿ, ವೆಚ್ಚದಲ್ಲಿ ಮಿತವ್ಯಯಕಾರಿಯಾಗಿದೆ. ರೈಲು ವಿದ್ಯುತ್ ಚಾಲಿತವಾಗಿರುವದರಿಂದ ಪರಿಸರ ಮಾಲಿನ್ಯ ತಡೆಯುವುದರ ಜೊತೆಗೆ ಇಂಧನ ಉಳಿತಾಯವೂ ಅಗಲಿದೆ. ಹೀಗಾಗಿ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಅಭಿವೃದ್ಧಿಗೆ ಒತ್ತು ನೀಡುಬೇಕು ಎಂದು ಆಗ್ರಹಿಸಿದ್ದಾರೆ.
ಸಭೆಯಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ವಿನಯ ಜವಳಿ, ಕಾರ್ಯದರ್ಶಿ ಪ್ರವೀಣ ಅಂಗಡಿ, ಮಾಜಿ ಅಧ್ಯಕ್ಷ ವಸಂತ ಲದವಾ, ಎಂ. ಸಿ. ಹಿರೇಮಠ, ಶಂಕರಣ್ಣ ಮುನವಳ್ಳಿ, ರಮೇಶ ಪಾಟೀಲ, ಮಹೇಂದ್ರ ಲದ್ದಡ ಮೊದಲಾದವರು ಇದ್ದರು.

ಇಂದಿನ ಪ್ರಮುಖ ಸುದ್ದಿ :-   ದಿ ಹಿಂದೂ ಸಂಗೀತ ಸ್ಪರ್ಧೆ: ಬಾಲಪ್ರತಿಭೆ ವಿಭಾಗದಲ್ಲಿ ಕುಮಟಾದ ಅದಿತಿ ಶಾನಭಾಗ ಪ್ರಥಮ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement