ಕನಕಪುರದ ಡಿಕೆ ಶಿವಕುಮಾರ ನಿವಾಸದಲ್ಲಿ ಸಿಬಿಐ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ

ರಾಮನಗರ: ಕನಕಪುರದಲ್ಲಿನ ಡಿ.ಕೆ.ಶಿವಕುಮಾರ ನಿವಾಸದ ಮೇಲೆ ಸಿಬಿಐ (CBI) ಅಧಿಕಾರಿಗಳ ತಂಡ ಬುಧವಾರ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ ಎಂದು ವರದಿಯಾಗಿದೆ.
ಬುಧವಾರ ಬೆಳಗ್ಗೆ 11ರ ಸುಮಾರಿಗೆ ಎಂಟು ಮಂದಿ ಅಧಿಕಾರಿಗಳ ತಂಡ ಕನಕಪುರ ತಹಸೀಲ್ದಾರ್ ಅವರನ್ನು ಕರೆದುಕೊಂಡು ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿ ಕೆಲವೊಂದು ದಾಖಲೆಗಳ ಪರಿಶೀಲನೆ ಮಾಡಿದೆ. ಅಲ್ಲದೆ, ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರುಅಲ್ಲದೆ, ಅವರಿಗೆ ಸೇರಿದ ಆಸ್ತಿಗಳು ಹಾಗೂ ಅವರ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಸೇರಿದ ಆಸ್ತಿಗಳು ಬಗ್ಗೆ ತಹಸೀಲ್ದಾರ ಅವರಿಂದ ಮಾಹಿತಿ ಸಂಗ್ರಹಿಸಿದೆ ಎನ್ನಲಾಗಿದೆ.

ಆದಾಯಕ್ಕೆ ಮೀರಿ ಆಸ್ತಿಗಳಿಕೆ ವಿಚಾರವಾಗಿ ಸಿಬಿಐ ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅರ್ಜಿ ಸಲ್ಲಿಸಿದ್ದಾರೆ. ಅಕ್ಟೋಬರ್ 2020ರಲ್ಲಿ ಡಿಕೆ ಶಿವಕುಮಾರ್‌ ವಿರುದ್ಧ ಆದಾಯಕ್ಕೂ ಮೀರಿದ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರಕರಣ ದಾಖಲಿಸಿತ್ತು. ಶಿವಕುಮಾರ ಹಾಗೂ ಅವರ ಕುಟುಂಬಸ್ಥರು 74.93 ಕೋಟಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.
ಈಗಾಗಲೇ ಅಕ್ರಮ ಹಣ ವರ್ಗಾವಣೆ, ಆಸ್ತಿ ಗಳಿಗೆ ಪ್ರಕರಣಗಳಲ್ಲಿ ಡಿ.ಕೆ.ಶಿವಕುಮಾರ ಆರೋಪಿಯಾಗಿದ್ದು, ಇ.ಡಿ ಅಧಿಕಾರಿಗಳು ಸಹ ಾವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement