ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ರೇಸ್‌ನಲ್ಲಿ ಈಗ ದಿಗ್ವಿಜಯ ಸಿಂಗ್: ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಕೆ..?!

ನವದೆಹಲಿ: ರಾಜಸ್ಥಾನದ ಬಿಕ್ಕಟ್ಟಿನ ನಂತರ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಈಗ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು, ಬುಧವಾರ ರಾತ್ರಿ ದೆಹಲಿಗೆ ಮರಳಲಿರುವ ದಿಗ್ವಿಜಯ ಸಿಂಗ್ ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅದು ಹೇಳಿದೆ. ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಂಡಾಯದ ನಂತರ ಅಶೋಕ್ ಗೆಹ್ಲೋಟ್ ಅವರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಗೆ ಪ್ರಶ್ನಾರ್ಥಕ ಚಿಹ್ನೆ ಮೂಡಿದ ನಂತರ ದಿಗ್ವಿಜಯ ಸಿಂಗ್, ಕೆ.ಸಿ. ವೇಣುಗೋಪಾಲ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಹೆಸರುಗಳು ಮುಂಚೂಣಿಯಲ್ಲಿವೆ.
ಅಕ್ಟೋಬರ್ 17ರಂದು ನಡೆಯಲಿರುವ ಎಐಸಿಸಿ ಅಧ್ಯಕ್ಷರ ಚುನಾವಣೆಗೆ ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಕೂಡ ರೇಸ್ ನಲ್ಲಿದ್ದಾರೆ.

ಏತನ್ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂಬ ನಿರ್ಧಾರಕ್ಕೆ ರಾಹುಲ್ ಗಾಂಧಿ ದೃಢವಾಗಿ ಅಂಟಿಕೊಂಡಿದ್ದಾರೆ. 2019 ರಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಪಕ್ಷ ಸತತ ಎರಡನೇ ಸೋಲು ಅನುಭವಿಸಿದ ನಂತರ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಹಂಗಾಮಿ ಅಧ್ಯಕ್ಷರಾಗಿ ಮತ್ತೆ ಪಕ್ಷದ ಆಡಳಿತವನ್ನು ವಹಿಸಿಕೊಂಡ ಸೋನಿಯಾ ಗಾಂಧಿ, ಜಿ -23 ಎಂದು ಉಲ್ಲೇಖಿಸಲಾದ ನಾಯಕರ ಒಂದು ವಿಭಾಗದ ಬಹಿರಂಗ ಬಂಡಾಯದ ನಂತರ ಆಗಸ್ಟ್ 2020 ರಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದರು, ಆದರೆ ಸಿಡಬ್ಲ್ಯೂಸಿ ಅವರನ್ನು ಮುಂದುವರಿಸಲು ಒತ್ತಾಯಿಸಿತ್ತು.

ಪ್ರಮುಖ ಸುದ್ದಿ :-   ನಿಮ್ಮವನಾಗಿದ್ದೆ...ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement